ETV Bharat / state

ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ದೇಣಿಗೆ ನೀಡಿದ ಜೆಡಿಎಸ್ ಶಾಸಕ

author img

By

Published : Feb 9, 2021, 11:56 AM IST

ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ 5 ಲಕ್ಷ ದೇಣಿಗೆ ನೀಡಿದ್ದಾರೆ.

MLA SARA Mahesh
5 ಲಕ್ಷ ದೇಣಿಗೆ ನೀಡಿದ ಜೆಡಿಎಸ್ ಶಾಸಕ

ಮೈಸೂರು: ರಾಮ ಮಂದಿರ ನಿರ್ಮಾಣಕ್ಕೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ 5 ಲಕ್ಷ ದೇಣಿಗೆ ನೀಡಿದ್ದಾರೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸಾ.ರಾ. ಮಹೇಶ್ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ 5 ಲಕ್ಷ ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ರಾಮ ಮಂದಿರಕ್ಕೆ 5 ಲಕ್ಷ ನೀಡುತ್ತಿರುವುದು ನನಗೆ ಸಂತೋಷ ತಂದಿದೆ. ಶ್ರೀ ರಾಮ ದೇವಾಲಯ ಯಾವುದೇ ಪಕ್ಷಕ್ಕೆ ಸೀಮಿತವಲ್ಲ ಎಲ್ಲರಿಗೂ ಶ್ರೀ ರಾಮ ಮಂದಿರ ಸೇರಿದ್ದು ಎಂದರು.

ಪಾಲಿಕೆಯಲ್ಲಿ ಮೈತ್ರಿಗೆ ಮಾತುಕತೆ:

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಮೀಸಲಾತಿ ನಾಳೆ ಪ್ರಕಟವಾಗುವ ನಿರೀಕ್ಷೆ ಇದ್ದು, ಈ ಬಾರಿ ಹೇಗಾದರೂ ಪಾಲಿಕೆಯ ಅಧಿಕಾರ ಹಿಡಿಯಲು ಬಿಜೆಪಿ ಕಸರತ್ತು ನಡೆಸಿದ್ದು, ಜೆಡಿಎಸ್​​ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಸಾ. ರಾ. ಮಹೇಶ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಆ ಮೂಲಕ ಈ ಬಾರಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಸಾಧ್ಯತೆ ಇದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.