ETV Bharat / state

ವಿಶ್ವವಿಖ್ಯಾತ 'ಮೈಸೂರು ದಸರಾ' ಮಹೋತ್ಸವ.. ರಾಷ್ಟ್ರಪತಿಯಿಂದ ವಿದ್ಯುಕ್ತ ಚಾಲನೆ

author img

By

Published : Sep 26, 2022, 10:29 AM IST

Updated : Sep 27, 2022, 6:09 AM IST

President Draupadi Murmu to inagurate Mysore Dasara
ಮೈಸೂರು ದಸರಾಗೆ ರಾಷ್ಟ್ರಪತಿಯಿಂದ ವಿದ್ಯುಕ್ತ ಚಾಲನೆ

ನಾಡ ಅಧಿದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾ 2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿದ್ಯುಕ್ತ ಚಾಲನೆ ನೀಡಿದರು.

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ನೀಡಿದರು.

ಇಂದು ಚಾಮುಂಡಿ ಬೆಟ್ಟದ ವೇದಿಕೆಯಲ್ಲಿ ನಾಡಹಬ್ಬ ದಸರಾಗೆ 9:45 ರಿಂದ 10.05 ನಿಮಿಷದ ವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ಬೆಳ್ಳಿ ರಥದಲ್ಲಿ ಆಸೀನರಾಗಿರುವ ನಾಡದೇವತೆ ಚಾಮುಂಡಿ ತಾಯಿಯ ಉತ್ಸವ ಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು. ನಂತರ ಉದ್ಘಾಟನಾ ಭಾಷಣ ಮಾಡಿದರು.

ವಿಶ್ವವಿಖ್ಯಾತ 'ಮೈಸೂರು ದಸರಾ' ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

ಇದಕ್ಕೂ ಮುನ್ನ ರಾಷ್ಟ್ರಪತಿಗಳು ಶಕ್ತಿ ದೇವತೆ ಚಾಮುಂಡಿ ತಾಯಿಯ ದರ್ಶನ ಪಡೆದರು. ರಾಷ್ಟ್ರಪತಿಗಳಿಗೆ ಸಾಂಪ್ರದಾಯಿಕವಾಗಿ ಸ್ವಾಗತ ನೀಡಿದ ನಂತರ ಹುಣಸೂರು ಮತ್ತು ಕೊಡಗು ಭಾಗದಿಂದ ಬಂದಿದ್ದ ಬುಡಕಟ್ಟು ಜನರ ಜೊತೆಗೆ ಫೋಟೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿಶ್ವವಿಖ್ಯಾತ 'ಮೈಸೂರು ದಸರಾ' ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ

ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ನಾಡಹಬ್ಬ ದಸರಾವನ್ನು ಉದ್ಘಾಟನೆ ಮಾಡುತ್ತಿರುವುದು ವಿಶೇಷವಾಗಿದೆ. ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ ಸೇರಿದಂತೆ ಕೇಂದ್ರದ ಹಲವು ಸಚಿವರು, ರಾಜ್ಯದ ಸಚಿವರು ವೇದಿಕೆಯಲ್ಲಿದ್ದರು.

ಇದನ್ನೂ ಓದಿ: ಇಂದು ರಾಷ್ಟ್ರಪತಿ ಮುರ್ಮುರಿಂದ ನಾಡಹಬ್ಬ ದಸರಾಗೆ ಚಾಲನೆ.. ವೈವಿಧ್ಯಮಯ ಕಾರ್ಯಕ್ರಮಗಳ ವಿವರ

Last Updated :Sep 27, 2022, 6:09 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.