ETV Bharat / state

ಕೋವಿಡ್​ ಭಯ.. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

author img

By

Published : Jul 20, 2020, 5:24 PM IST

ಮಧ್ಯ ರಾತ್ರಿಯವರೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು, ಕೊನೆಗೆ ಪರಿಚಿತ ವೈದ್ಯರೊಬ್ಬರ ಸಹಾಯದಿಂದ ಮಧ್ಯರಾತ್ರಿ 1 ಗಂಟೆಗೆ ನರ್ಸಿಂಗ್ ಹೋಂ ಒಂದಕ್ಕೆ ದಾಖಲಿಸಲಾಯಿತು. ಆದರೆ, ಭಾನುವಾರ ಸಂಜೆ ನಟಿ ಶಾಂತಮ್ಮ ನಿಧರಾದರು..

Privet Hospital are Hesitating to treat Non Covid Patients
ಕೋವಿಡ್​ ಭಯದಿಂದ ಚಿಕಿತ್ಸೆ ನಿರಾಕರಣೆ

ಮೈಸೂರು : ಕೋವಿಡ್ ಭಯದಿಂದ ಖಾಸಗಿ ಆಸ್ಪತ್ರೆಗಳು ಇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸಕಾಲಕ್ಕೆ ಚಿಕಿತ್ಸೆ ಸಿಗದೆ ಜನ ಸಾಯುತ್ತಿರುವ ಘಟನೆಗಳು ಪ್ರತಿದಿನ ನಡೆಯುತ್ತಿವೆ.

ಖಾಸಗಿ ಆಸ್ಪತ್ರೆಗಳು ಕೋವಿಡ್​ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಶೇ.50ರಷ್ಟು ಬೆಡ್ ಮೀಸಲಿಡಬೇಕು. ಚಿಕಿತ್ಸೆ ನೀಡಲು ತಾತ್ಸಾರ ಮಾಡಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಆದೇಶ ನೀಡಿದೆ. ಹೀಗಾಗಿ, ಕೋವಿಡ್​ ಅಲ್ಲದ ರೋಗಿಗಳು ಚಿಕಿತ್ಸೆಗೆ ತೆರಳಿದ್ರೆ, ಬೆಡ್​, ಸಿಬ್ಬಂದಿ ಕೊರತೆಯ ನೆಪವೊಡ್ಡಿ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕುತ್ತಿವೆ. ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ಇದೇ ರೀತಿಯ ಪರಿಸ್ಥಿತಿಯಿದೆ. ಹೀಗಾಗಿ ಕೋವಿಡ್​ ಅಲ್ಲದೆ ರೋಗಿಗಳು ಸಕಾಲಕ್ಕೆ ಚಿಕಿತ್ಸೆ ಸಿಗದೆ ಪರದಾಡುವಂತಾಗಿದೆ.

ನಿನ್ನೆಯ ಘಟನೆಯೇ ಉದಾಹರಣೆ : ನಿನ್ನೆ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ.ಶಾಂತಮ್ಮ ಮೈಸೂರಿನ ತಮ್ಮ ಮಗಳ ಮನೆಯಲ್ಲಿ ನಿಧನರಾದರು. ಇವರು ಶನಿವಾರ ಮಧ್ಯಾಹ್ನ ಊಟ ಮಾಡುವಾಗ ಗಂಟಲಿನಲ್ಲಿ ಅನ್ನ ಇಳಿಯುತ್ತಿರಲಿಲ್ಲ. ಅನ್ನನಾಳದ ಸಮಸ್ಯೆಯಿಂದ ಈ ರೀತಿ ಆಗುತ್ತಿರಬಹುದು ಎಂದು ಅವರ ಮಗಳು ನರ್ಸಿಂಗ್ ಹೋಂ ಒಂದಕ್ಕೆ ಕರೆದೊಯ್ದರು. ಈ ವೇಳೆ ನರ್ಸಿಂಗ್ ಹೋಂನವರು ನಮ್ಮಲ್ಲಿ ಬೆಡ್​ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಶಾಂತಮ್ಮರನ್ನು ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.

ಅಲ್ಲೂ ಇದೇ ರೀತಿಯ ಉತ್ತರ ದೊರೆತಿದೆ. ಮಧ್ಯ ರಾತ್ರಿಯವರೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದು, ಕೊನೆಗೆ ಪರಿಚಿತ ವೈದ್ಯರೊಬ್ಬರ ಸಹಾಯದಿಂದ ಮಧ್ಯರಾತ್ರಿ 1 ಗಂಟೆಗೆ ನರ್ಸಿಂಗ್ ಹೋಂ ಒಂದಕ್ಕೆ ದಾಖಲಿಸಲಾಯಿತು. ಆದರೆ, ಭಾನುವಾರ ಸಂಜೆ ನಟಿ ಶಾಂತಮ್ಮ ನಿಧರಾದರು. ಸಕಾಲಕ್ಕೆ ತಾಯಿಗೆ ಚಿಕಿತ್ಸೆ ಸಿಕ್ಕಿದ್ದರೆ ಇನ್ನಷ್ಟು ದಿನ ನಮ್ಮ ಜೊತೆಯಿರುತ್ತಿದ್ದರು ಎಂದು ಮಗಳು ಸುಮನಾ ಅಳಲು ತೋಡಿಕೊಂಡಿದ್ದಾರೆ. ಈ ಘಟನೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೆ ಜನ ಪರದಾಡುತ್ತಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.

Privet Hospital are Hesitating to treat Non Covid Patients
ಭಾನುವಾರ ನಿಧನರಾದ ಹಿರಿಯ ನಟಿ ಬಿ. ಶಾಂತಮ್ಮ

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನಿರಾಕರಣೆಗೆ ಬೆಡ್​, ಸಿಬ್ಬಂದಿ ಕೊರತೆ ಒಂದು ನೆಪ ಮಾತ್ರವಾಗಿದೆ. ಹೆಚ್ಚಿನ ಆಸ್ಪತ್ರೆಗಳಲ್ಲಿ ಕೋವಿಡ್​ ಭಯದಿಂದ ರೋಗಿಗಳನ್ನು ದಾಖಲಿಸಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮಾತ್ರವಲ್ಲದೆ, ಮೆಡಿಕಲ್ ಶಾಪ್​ಗಳಲ್ಲಿ ಔಷಧಿಗಳು ಕೂಡ ಸಿಗುತ್ತಿಲ್ಲ.

ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ವೆಂಕಟೇಶ್ ಅವರನ್ನು ಕೇಳಿದ್ರೆ, ಯಾವುದೇ ರೋಗಿಗಳಿಗೆ ಚಿಕಿತ್ಸೆ ಕೊಡಲು ಖಾಸಗಿ ಆಸ್ಪತ್ರೆಗಳು ನಿರಾಕರಿಸುವಂತಿಲ್ಲ. ಆದರೆ, ಕೋವಿಡ್ ಜೊತೆ ಇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.