ETV Bharat / state

ಬಿಟ್ ಕಾಯಿನ್ ಪ್ರಕರಣ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ ಸಿಗಲಿದ್ದಾರೆ: ಪ್ರಿಯಾಂಕ್ ಖರ್ಗೆ

author img

By

Published : May 2, 2022, 1:06 PM IST

ಬಿಟ್ ಕಾಯಿನ್ ಪ್ರಕರಣದ ಕುರಿತು ಯಾವುದೇ ರೀತಿಯ ತನಿಖೆ ನಡೆಯುತ್ತಿಲ್ಲ. ಈ ಸಂಬಂಧ ಪಾರದರ್ಶಕ ತನಿಖೆಯಾದರೆ ನಮ್ಮ ರಾಜ್ಯಕ್ಕೆ ಬಿಜೆಪಿಯಿಂದ 3 ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು ಪ್ರಿಯಾಂಕ್​ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ  , Priyank Kharge
ಪ್ರಿಯಾಂಕ್ ಖರ್ಗೆ

ಮೈಸೂರು: ಬಿಟ್ ಕಾಯಿನ್ ಪ್ರಕರಣ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು ಶಾಸಕ ಪ್ರಿಯಾಂಕ್​ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಚಾರ್ಜ್ ಆದ ಮೇಲೆ ಯಾವುದೇ ರೀತಿಯ ತನಿಖೆ ನಡೆಯುತ್ತಿಲ್ಲ. ಅಂದು ಮತ್ತು ಇಂದು ಹೇಳುತ್ತಿದ್ದೇನೆ, ಬಿಟ್ ಕಾಯಿನ್ ಪಾರದರ್ಶಕ ತನಿಖೆಯಾದರೆ ನಮ್ಮ ರಾಜ್ಯಕ್ಕೆ ಬಿಜೆಪಿಯಿಂದ 3 ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು ಹೇಳಿದರು.

ಪಿಎಸ್ಐ ಪರೀಕ್ಷೆ ಅಕ್ರಮ ವಿಚಾರವಾಗಿ ಮಾತನಾಡಿದ ಅವರು, ತನಿಖೆ ಕಲಬುರಗಿಗೆ ಮಾತ್ರ ಸೀಮಿತವಾಗಬಾರದು. ಸರ್ಕಾರ ಸೂಕ್ತ ತನಿಖೆ ನಡೆಸದೆ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಕೇವಲ ಒಂದೇ ಪರೀಕ್ಷಾ ಕೇಂದ್ರದ ವಿರುದ್ಧ ಎಫ್ ಐಆರ್ ಮಾಡಿದ್ದಾರೆ. ಬೇರೆ ಬೇರೆ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಮೇಲೂ ತನಿಖೆಯಾಗಬೇಕು. ಈ ಕುರಿತು ಪರೀಕ್ಷಾ ಅಭ್ಯರ್ಥಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ತನಿಖೆ ಮಾತ್ರ ನಡೆಯುತ್ತಿಲ್ಲ ಎಂದು ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ

ಮರು ಪರೀಕ್ಷೆ ಮಾಡಬೇಕೆಂದಿರುವ ಸರ್ಕಾರ, 545 ಮಂದಿಯ ಓಎಂಆರ್ ಶೀಟ್ ತರಿಸಿಕೊಂಡಿದ್ದಾದರೂ ಯಾಕೆ?, ಇಲ್ಲಿ ಸರ್ಕಾರದ ದಡ್ಡತನ ಎದ್ದು ಕಾಣುತ್ತಿದ್ದೆ. 300 ಜನರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಅವರೇ ಹೇಳಿದ್ದಾರೆ. ಆದರೆ ಸರ್ಕಾರ ಇಲ್ಲಿಯವರೆಗೆ ಎಷ್ಟು ಜನರನ್ನ ಅರೆಸ್ಟ್ ಮಾಡಿದೆ?. ಒಂದೆರಡು ಕಿಂಗ್ ಪಿನ್ ಸಿಕ್ಕರೆ ಅದರಲ್ಲೇ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪಿಎಸ್ಐ ದೈಹಿಕ ಪರೀಕ್ಷೆಯಲ್ಲೂ ಗೋಲ್​ಮಾಲ್: ಪ್ರಿಯಾಂಕ್ ಖರ್ಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.