ETV Bharat / state

ಸುತ್ತೂರು ಶಾಖಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ.. ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್​ ನಾಯಕ

author img

By

Published : Oct 3, 2022, 6:41 AM IST

ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಎಐಸಿಸಿ ನಾಯಕ ರಾಹುಲ್ ಗಾಂಧಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

Rahul Gandhi visits suttur shakha mutt in Mysore
ಸುತ್ತೂರು ಶಾಖಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ

ಮೈಸೂರು: ಭಾರತ್ ಜೋಡೋ ಯಾತ್ರೆ ನೇತೃತ್ವ ವಹಿಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭಾನುವಾರ ರಾತ್ರಿ ಭೇಟಿ ನೀಡಿದ್ದರು.

ನಂಜನಗೂಡಿನ ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ ಬಳಿಕ ಭಾರತ್ ಜೋಡೋ ಯಾತ್ರೆ ಮೂಲಕ ನಗರಕ್ಕೆ ಆಗಮಿಸಿದರು. ನಂತರ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿ ಅವರ ಆಶೀರ್ವಾದ ಪಡೆದರು.

Rahul Gandhi visits suttur shakha mutt in Mysore
ಸುತ್ತೂರು ಶಾಖಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ

ಎಐಸಿಸಿ ಪ್ರಮುಖರಾದ ರಣದೀಪ್ ಸುರ್ಜೇವಾಲಅ, ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಮತ್ತಿತರರು ಇದ್ದರು.

ಇದನ್ನೂ ಓದಿ: ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ: ಮಹಾತ್ಮನಿಗೆ ನಮನ ಸಲ್ಲಿಸಿ ಭಜನೆ... ಖಾದಿ ಕೇಂದ್ರಕ್ಕೆ ರಾಹುಲ್ ಭೇಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.