ETV Bharat / state

ಮೈಸೂರು ನಗರ ಪಾಲಿಕೆ ಸದಸ್ಯತ್ವ ರದ್ದು: ಮೇಲ್ಮನವಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

author img

By

Published : Jun 15, 2021, 12:30 PM IST

supreme-court-plea-adjourned-by-rukmini-madegowda
ಮೈಸೂರು ನಗರ ಪಾಲಿಕೆ ಸದಸ್ಯತ್ವ ರದ್ದು : ಮೇಲ್ಮನವಿ ವಿಚಾರಣೆ ಮುಂದೂಡಿದ ಸುಪ್ರೀಂ

ಮೈಸೂರು ನಗರ ಪಾಲಿಕೆ ಸದಸ್ಯತ್ವ ರದ್ದು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೇಯರ್ ರುಕ್ಮಿಣಿ ಮಾದೇಗೌಡ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

ಮೈಸೂರು: ನಗರ ಪಾಲಿಕೆ ಸದಸ್ಯತ್ವ ರದ್ದು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಅವರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅವರ ಅರ್ಜಿ ವಿಚಾರಣೆಯನ್ನು ಜೂನ್ 28ಕ್ಕೆ ಮುಂದೂಡಿದೆ.

ಪಾಲಿಕೆ ಚುನಾವಣೆ ವೇಳೆ ಬಹಿರಂಗಪಡಿಸಿದ ಆಸ್ತಿಯ ಮಾಹಿತಿಯಲ್ಲಿ ಆಗಿರುವ ದೋಷಕ್ಕೆ ಸಂಬಂಧಿಸಿದಂತೆ ಈ ಹಿಂದೆ ರುಕ್ಮಿಣಿ ಮಾದೇಗೌಡ ಅವರ ನಗರ ಪಾಲಿಕೆ ಸದಸ್ಯತ್ವ ರದ್ದು ಮಾಡಿ, ಪರಾಜಿತ ಅಭ್ಯರ್ಥಿಗೆ ಸದಸ್ಯತ್ವ ನೀಡುವಂತೆ ಜಿಲ್ಲಾ ನ್ಯಾಯಾಲಯ ಆದೇಶ ನೀಡಿತ್ತು.

ಇದಾದ ಬಳಿಕ ರುಕ್ಮಿಣಿ ಮಾದೇಗೌಡ ಹೈಕೋರ್ಟ್​ನಲ್ಲಿ ದಾವೆ ಹೂಡಿದ್ದು, ಹೈಕೋರ್ಟ್ ಮರುಚುನಾವಣೆಗೆ ಆದೇಶಿಸಿತ್ತು. ಈಗ ತಮ್ಮ ಪರವಾಗಿ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ರುಕ್ಮಿಣಿ ಮಾದೇಗೌಡ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಗರಸಭೆ ಸದಸ್ಯತ್ವ ರದ್ದು ಆದೇಶವನ್ನು ರದ್ದುಪಡಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ: Viral Video: ಚಿಂಕಾರ ಬೇಟೆ ತಡೆದ ಬಾಲಕ; ರಾಜಸ್ತಾನ ಅರಣ್ಯ ಮಂತ್ರಿಯಿಂದ ಶ್ಲಾಘನೆ

ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ. ನನ್ನ ಹೆಸರಲ್ಲಿ ಯಾವುದೇ ಆಸ್ತಿ ಇರಲಿಲ್ಲ. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಪತಿಯ ಆಸ್ತಿಯನ್ನು ನನ್ನ ಆಸ್ತಿ ಅಂತ ಘೋಷಣೆ ‌ಮಾಡಿಕೊಂಡಿದ್ದೆ. ಅವರ ಹೆಸರಲ್ಲಿ ಎಷ್ಟು ಆಸ್ತಿ ಇದೆ ಎಂಬುದು ನನಗೆ ಗೊತ್ತಿರಲಿಲ್ಲ. ಇದು ನನಗೆ ಗೊತ್ತಿಲ್ಲದೇ ಆಗಿರುವಂತಹ ತಪ್ಪು ಎಂದಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.