ನಂಜನಗೂಡು: ಜಾನುವಾರು ಮೇಯಿಸುತ್ತಿದ್ದ ರೈತನ ಮೇಲೆ ಹುಲಿ ದಾಳಿ

author img

By

Published : Dec 12, 2022, 8:38 PM IST

tiger attacks on farmer in mysuru

ರೈತನ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ಮೈಸೂರು: ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ಸ್ವಾಮಿ (52) ಎಂಬ ರೈತನ ಮೇಲೆ ಹುಲಿ ದಾಳಿ ಮಾಡಿದ ಘಟನೆ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ನಡೆದಿದೆ. ಅಕ್ಕಪಕ್ಕದಲ್ಲಿದ್ದ ಜಮೀನಿನ ರೈತರು ಜೋರಾಗಿ ಕಿರುಚಿಕೊಂಡಾಗ ಹುಲಿ ಪರಾರಿಯಾಗಿದೆ. ರೈತನ ತಲೆ, ಕೆನ್ನೆಗೆ ಗಾಯಗಳಾಗಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹುಲಿ ದಾಳಿ ಹಿನ್ನೆಲೆಯಲ್ಲಿ ಕಾಡಂಚಿನ ಪ್ರದೇಶದ ರೈತರು ತಮ್ಮ ಜಮೀನುಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕೆಲದಿನಗಳ ಹಿಂದಷ್ಟೇ ಪುಟ್ಟಸ್ವಾಮಿ ಗೌಡ ಎಂಬ ರೈತನನ್ನು ಹುಲಿ ಬಲಿ ಪಡೆದಿತ್ತು. ಇಲಾಖೆಯ ನಿರ್ಲಕ್ಷ್ಯದಿಂದ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. ಕೂಡಲೇ ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಟಿ.ನರಸಿಪುರ ತಾಲ್ಲೂಕಿನ ನುಗ್ಗೇಹಳ್ಳಿಕೊಪ್ಪಲು ಬಳಿ ಮೇಕೆ, ಆಡು ಬೇಟೆಯಾಡಿ ಚಿರತೆ ಪರಾರಿಯಾಗಿದೆ. ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಚಿರತೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸುಮಾರು ಒಂದು ತಿಂಗಳಾದರೂ ಚಿರತೆ ಸೆರೆಹಿಡಿಯುವಲ್ಲಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮನೆಯ ಲಾಕರ್‌ನಲ್ಲಿ ಹುಲಿ ಚರ್ಮ ಸಂಗ್ರಹಿಸಿಟ್ಟಿದ್ದ ಆರೋಪಿ ಸೆರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.