ETV Bharat / state

ಗುರುಪುರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಕಾಡಾನೆ ಸಾವು

author img

By

Published : Aug 14, 2021, 3:37 PM IST

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗುರುಪುರ ಗ್ರಾಮದಲ್ಲಿ ಕಾಡಾನೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.

Wild elephant dead body found in Gurupura at Mysore
ಗುರುಪುರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಕಾಡಾನೆ ಸಾವು

ಮೈಸೂರು: ಕಾಡಾನೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿಯ ಗುರುಪುರ ಗ್ರಾಮದ ಬಳಿಯ ಎನ್.ವಿಲೇಜ್ ಎಂಬಲ್ಲಿ ಸುಮಾರು 30 ವರ್ಷದ ಆನೆ ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಟಿಬೇಟಿಯನ್ ನಿವಾಸಿಯೊಬ್ಬರ ಜಮೀನಿನ ಬಳಿ ತಂತಿ ಬೇಲಿ ಹೊಂದಿಕೊಂಡಂತಿರುವ ಸ್ಥಳದಲ್ಲಿ ಆನೆಯ ಕಳೇಬರ ಪತ್ತೆಯಾಗಿದೆ.

ಆನೆ ಮೈ ಮೇಲೆ ಯಾವುದೇ ಗಾಯಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಖಚಿತ ಮಾಹಿತಿ ತಿಳಿಯಲು ಸಾಧ್ಯ ಎಂದು ಎಸಿಎಫ್ ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.