ETV Bharat / state

ಬಾಣಂತಿ ಆತ್ಮಹತ್ಯೆ: ಮಹಿಳೆ ಕುಟುಂಬಸ್ಥರಿಂದ ಕೊಲೆ ಆರೋಪ

author img

By

Published : Feb 16, 2022, 12:40 PM IST

Women committed suicide at Mysore
ಮೈಸೂರಲ್ಲಿ ಬಾಣಂತಿ ಆತ್ಮಹತ್ಯೆ

ಮಹಿಳೆಯ ಪತಿ ಖಾಸಗಿ ಕಂಪನಿಯಲ್ಲಿ ಕಂಪ್ಯೂಟರ್ ಉದ್ಯೋಗಿಯಾಗಿದ್ದ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಇದರ ನಡುವೆ ನಂದಿನಿ ಗಂಡನೊಂದಿಗೆ ಜಗಳವಾಡಿಕೊಂಡು ಆತ ಬೇರೆ ರೂಮ್​​ನಲ್ಲಿ ಮಲಗಿದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ..

ಮೈಸೂರು : ಹತ್ತು ತಿಂಗಳ ಮಗುವಿನ ತಾಯಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ.

ನಂದಿನಿ (26) ಎಂಬುವರು ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಇವರು ಕಳೆದೆರಡು ವರ್ಷಗಳ ಹಿಂದೆ ಜನತಾನಗರದ ವಿಜಿ ಎಂಬುವರನ್ನು ವಿವಾಹವಾಗಿದ್ದರು. ಇವರಿಗೆ ಹತ್ತು ತಿಂಗಳ ಮಗು ಕೂಡ ಇದೆ.

ಮಹಿಳೆಯ ಪತಿ ಖಾಸಗಿ ಕಂಪನಿಯಲ್ಲಿ ಕಂಪ್ಯೂಟರ್ ಉದ್ಯೋಗಿಯಾಗಿದ್ದ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಇದರ ನಡುವೆ ನಂದಿನಿ ಗಂಡನೊಂದಿಗೆ ಜಗಳವಾಡಿಕೊಂಡು ಆತ ಬೇರೆ ರೂಮ್​​ನಲ್ಲಿ ಮಲಗಿದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಮಹಿಳೆಯ ಕುಟುಂಬಸ್ಥರು ಇದೊಂದು ವರದಕ್ಷಿಣೆ ಕಿರುಕುಳದ ಸಾವಾಗಿದೆ ಎಂದು ಆರೋಪಿಸಿ ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇತ್ತ ಮಹಿಳೆಯ ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಪತ್ನಿ ಸಮಾಧಿ ಪಕ್ಕದಲ್ಲೇ ಸಂಜೆ ಕವಿ ಚೆನ್ನವೀರ ಕಣವಿ ಅಂತ್ಯಕ್ರಿಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.