ETV Bharat / state

ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

author img

By

Published : Aug 8, 2022, 4:06 PM IST

ರಾಯಚೂರಿನ ಸಿಂಧನೂರಿನಲ್ಲಿ ಬಸ್​​ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ
ಬಸ್ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ

ರಾಯಚೂರು: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಸಿಂಧನೂರು ತಾಲೂಕಿನ ಗೊರೇಬಾಳ ಕ್ಯಾಂಪ್ ಬಳಿ ಈ ದುರ್ಘಟನೆ ಜರುಗಿದೆ.

ಮೃತರನ್ನು ಗಂಗಾವತಿ ತಾಲೂಕಿನ ಮುಷ್ಟೂರು ಗ್ರಾಮದ ದುರಗಪ್ಪ (42), ಈರಣ್ಣ (38) ಎಂದು ಗುರುತಿಸಲಾಗಿದೆ. ಶ್ರಾವಣ ‌ಮಾಸದ ಪೂಜೆ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚರ್ಚ್​ಗೆ ನೀಡಲಾದ ಅನುದಾನ ವಿಚಾರಕ್ಕೆ ಜಗಳ: ಇಬ್ಬರಿಗೆ ಚಾಕು ಇರಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.