ETV Bharat / state

ರಾಯಚೂರು ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ..!

author img

By

Published : Jul 27, 2020, 4:17 PM IST

ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ ಅವರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹೊರಡಿಸಿದ್ದಾರೆ.

presidents of board of corporation
ರಾಯಚೂರು ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ರಾಯಚೂರು: ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ರಾಯಚೂರು ಜಿಲ್ಲೆಯ ಇಬ್ಬರು ಬಿಜೆಪಿ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಅವರಿಗೆ ರಾಜ್ಯ ಜೈವಿಕ ಇಂಧನ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸ್ಥಾನ ಹಾಗೂ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಅವರಿಗೆ ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಯಚೂರು ಜಿಲ್ಲೆಗೆ ಎರಡು ನಿಗಮ ಮಂಡಳಿ ಸ್ಥಾನ ಕೊಟ್ಟಿದ್ದಾರೆ.

ಈ ಇಬ್ಬರು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ರು. ಸಚಿವ ಸ್ಥಾನದ ಬದಲಾಗಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಅವರನ್ನು ಸಿಎಂ ಬಿಎಸ್​ವೈ ಸಮಾಧಾನ ಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.