ETV Bharat / state

ಕೇಂದ್ರ ಆರೋಗ್ಯ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ.. ರಾಯಚೂರಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ಬಲ

author img

By

Published : Jun 18, 2023, 5:07 PM IST

Updated : Jun 18, 2023, 5:30 PM IST

ರಾಯಚೂರು ಜಿಲ್ಲೆಯ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ನಗರದ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಏಮ್ಸ್ ಹೋರಾಟ ಸಮಿತಿ 401 ದಿನದಿಂದ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದೆ. ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸರ್ಕಾರ ಬಂದರೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಘೋಷಣೆ ಮಾಡಿತು.

Struggle Committee Indefinite Protest
ಏಮ್ಸ್ ಸ್ಥಾಪನೆಗೆ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿರುವುದು.

ರಾಯಚೂರಲ್ಲಿ ಏಮ್ಸ್ ಸ್ಥಾಪನೆ ಹೋರಾಟ

ರಾಯಚೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಾರ್ವವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಕುರಿತಾಗಿ ಭರವಸೆ ನೀಡಿತು, ಕೇಂದ್ರ ಸರ್ಕಾರದ ಆರೋಗ್ಯ ಸಚಿವರಿಗೆ ಕೊಟ್ಟ ಭರವಸೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವನ್ನು ಬರೆದಿದ್ದಾರೆ. ಇದು 401 ದಿನಗಳಿಂದ ಅನಿರ್ದಿಷ್ಟಾವಧಿ ಕೈಗೊಂಡಿರುವ ಹೋರಾಟಕ್ಕೆ ಬಲ ಬಂದಿದೆ.

ಹೌದು.., ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹಿಸಿ ನಗರದ ಮಹಾತ್ಮಗಾಂಧಿ ಪುತ್ಥಳಿ ಬಳಿ ಏಮ್ಸ್ ಹೋರಾಟ ಸಮಿತಿ 401 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತ ಬಂದಿದೆ. ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸರ್ಕಾರ ಬಂದರೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಘೋಷಣೆ ಮಾಡಿತ್ತು.

ಇದೀಗ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ನುಡಿದಂತೆ ನಡೆಯುತ್ತೇವೆ ಎಂದು ಇತ್ತೀಚೆಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜ ಅವರು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ್ದರು. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಕುರಿತಾಗಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ಅರ್ಟಿಕಲ್ 371 ಯೋಜನೆಯಡಿ ರಾಯಚೂರು ಜಿಲ್ಲೆಯಿದೆ. ಇಲ್ಲಿನ ಜನರ ಆರೋಗ್ಯ ಹಾಗೂ ಶಿಕ್ಷಣ, ತಲಾ ಆದಾಯದ ವಿಷಯದಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಹಿಂದುಳಿದ ಪ್ರದೇಶ. ಅತಿಹೆಚ್ಚು ಬಿಸಿಲಿನ ತಾಪಮಾನ ಇರುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಎದುರಾಗುತ್ತಿವೆ. ಹೀಗಾಗಿ ಜಿಲ್ಲೆಯ ಜನರ ಆರೋಗ್ಯದ ರಕ್ಷಣೆ ನೀಡಿನಲ್ಲಿ ಉತ್ತಮ ವೈದ್ಯಕೀಯ ಸಂಸ್ಥೆ ಸ್ಥಾಪನೆ ಅವಶ್ಯಕತೆಯಿದೆ. ಅಲ್ಲದೇ ಏಮ್ಸ್ ಸ್ಥಾಪನೆಗೆ ಬೇಡಿಕೆಯನ್ನು ಮುಂದಿಟ್ಟುಕೊಂಡು ಹಲವು ದಿನಗಳಿಂದ ಇಂದಿನವರೆಗೆ ಏಮ್ಸ್ ಹೋರಾಟ ಸಮಿತಿ ನಿರಂತರ ಪ್ರತಿಭಟನೆ ನಡೆಸುತ್ತಿದೆ. ಏಮ್ಸ್ ಸ್ಥಾಪಿಸುವ ಕುರಿತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಪತ್ರವನ್ನು ಬರೆದಿದ್ದಾರೆ.

ಏಮ್ಸ್ ಸ್ಥಾಪನೆಗೆ ನಾನು ಹಾಗೂ ವೈದ್ಯಕೀಯ ಶಿಕ್ಷಣ ಡಾ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಎಲ್ಲರೂ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. ಸಿಎಂ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ಮುಂದೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇತ್ತ ಜಿಲ್ಲಾಡಳಿತ ಏನು ಅವಶ್ಯಕತೆಗಳು ಬೇಕಾಗಿದೆ ಅ ಪ್ರಯತ್ನದಲ್ಲಿ ಸಹ ಇದೆ ಎಂದು ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ.

ಸಿಎಂ ಬರೆದಿರುವ ಪತ್ರದಿಂದ ಹೋರಾಟಕ್ಕೆ ಬಲ ಬಂದಿದೆ. ಏಮ್ಸ್ ಹೋರಾಟ ಸಮಿತಿ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಸಂಸದರು ಹಾಗೂ ಶಾಸಕರನ್ನು ಸೇರಿಸಿ ಒಂದು ಕಡೆ ಸಭೆ ನಡೆಸಿ ಕೇಂದ್ರ ಮೇಲೆ ಒತ್ತಡ ತರುವ ಮೂಲಕ ರಾಯಚೂರು ಜಿಲ್ಲೆಯ ಏಮ್ಸ್ ಸ್ಥಾಪನೆ ಹೋರಾಟ ಮುಂದುವರೆಸಲಾಗುತ್ತದೆ. ಎಲ್ಲಿಯವರೆಗೆ ಕೇಂದ್ರ ಸರ್ಕಾರ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವ ಕುರಿತಾಗಿ ಅಧಿಕೃತ ಘೋಷಣೆ ಮಾಡಿದ ಬಳಿಕವಷ್ಟೇ ಹೋರಾಟ ಅಂತ್ಯಗೊಳಿಸಲಾಗುವುದು. ಅಲ್ಲಿಯವರೆಗೆ ಹೋರಾಟ ನಿರಂತರವಾಗಿ ಇರುತ್ತದೆ ಎನ್ನುತ್ತಾರೆ ಏಮ್ಸ್ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಕಳಸ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂಬ ನೂರಾರು ದಿನಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸದ್ಯ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರವನ್ನು ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ತಮ್ಮ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ತಾಂತ್ರಿಕ ಕ್ರಮವಾಗಿ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಮುಂದಿನ ದಿನಗಳಲ್ಲಿ ಯಾವ ರೀತಿ ಹೆಜ್ಜೆ ಇಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂಓದಿ:Lakshmi Hebbalkar: ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉಪಕಾರ ಮರೆಯಲು ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Last Updated : Jun 18, 2023, 5:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.