ETV Bharat / state

ಸಚಿವ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಪೈಪೋಟಿ... ರಾಯಚೂರಲ್ಲಿ ಯಾರಿಗೆ ಮಣೆ ಹಾಕ್ತಾರೆ ಬಿಎಸ್​ವೈ?

author img

By

Published : Aug 2, 2019, 1:39 AM IST

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರದಲ್ಲಿ ಇದೀಗ ಸಚಿವ ಸ್ಥಾನಕ್ಕೆ ಶಾಸಕರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಇತ್ತ ರಾಯಚೂರು ಜಿಲ್ಲೆಯಲ್ಲೂ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಸ್ಪರ್ಧೆ ಏರ್ಪಟ್ಟಿದೆ.

ನೂತನ ಸರ್ಕಾರದ ಸಚಿವ ಸ್ಥಾನಕ್ಕಾಗಿ ಪೈಪೋಟಿ.!

ರಾಯಚೂರು: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರದಲ್ಲಿ ಇದೀಗ ಸಚಿವ ಸ್ಥಾನಕ್ಕೆ ಶಾಸಕರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಹೈದ್ರಾಬಾದ್​ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲೂ ಸಚಿವ ಸ್ಥಾನದ ಆಕ್ಷಾಂಕ್ಷಿಗಳಲ್ಲಿ ನಿರೀಕ್ಷೆಗಳು ಗರಿಗೆದರಿವೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನ ಬಳಿಕ, ನೂತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದೀಗ ರಾಜ್ಯದಲ್ಲಿ ನೂತನವಾಗಿ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರದ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದ್ದು, ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಶಾಸಕ ಕೆ.ಶಿವನಗೌಡ ನಾಯಕ 4ನೇ ಬಾರಿಗೆ ಶಾಸಕರಾಗಿ‌ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ, ಬಿಜೆಪಿಯ ಅಪರೇಷನ್ ಕಮಲಕ್ಕೆ ಒಳಗಾಗಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಮರು ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಚಿವ ಸ್ಥಾನ ಪಡೆದುಕೊಂಡಿದ್ದರು.

ಆದ್ರೆ ಈ ಬಾರಿ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿದೆ. ರಾಯಚೂರು ಕ್ಷೇತ್ರದ ಶಾಸಕ ಡಾ. ಶಿವರಾಜ್​ ಪಾಟೀಲ್​ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಶಿವರಾಜ್​ ಪಾಟೀಲ್​ ಬೆಂಬಲಿಗರು ಸಚಿವ ಸ್ಥಾನ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಇಬ್ಬರು ಬಿಜೆಪಿ ಶಾಸಕರ ಮಧ್ಯೆ ಕಾಂಗ್ರೆಸ್ ಅತೃಪ್ತ ಶಾಸಕರಲ್ಲಿ ಗುರುತಿಸಿಕೊಂಡಿದ್ದ ಹಾಗೂ ಶಾಸಕ ಸ್ಥಾನದಿಂದ ಅನರ್ಹಗೊಂಡ ಪ್ರತಾಪ್‌ಗೌಡ ಪಾಟೀಲ್ ಅಪರೇಷನ್ ಕಮಲಕ್ಕೆ ಒಳಗಾಗಿದ್ದಾರೆ ಎನ್ನಲಾಗ್ತಿದೆ. ಹಾಗಾಗಿ ಅವರಿಗೂ ಮುಂದೆ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕಾಗಿದೆ. ಸದ್ಯ ಅವರು ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದು, ಮುಂದೆ ಪ್ರತಾಪ್‌ಗೌಡರಿಗೆ ಸಚಿವ ಸ್ಥಾನ ಸಿಗುತ್ತದೆಯೋ, ಇಲ್ಲವೊ ಎನ್ನುವ ಗೊಂದಲ ಮೂಡಿದೆ.

Intro:ಸ್ಲಗ್: ಸಚಿವ ಸ್ಥಾನಕ್ಕೆ ಪೈಪೂಟಿ
ಫಾರ್ಮೇಟ್: ಪ್ಯಾಕೇಜ್
ರಿಪೋರ್ಟ್‌ರ್: ಮಲ್ಲಿಕಾರ್ಜುನ
ದಿನಾಂಕ: ೦೧-೦೮-೨೦೧೯
ಸ್ಥಳ: ರಾಯಚೂರು

ಆಂಕರ್: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರಕಾರದಲ್ಲಿ ಇದೀಗ ಸಚಿವ ಸ್ಥಾನಕ್ಕೆ ಶಾಸಕರು ತೀವ್ರ ಪೈಪೋಟಿ ನಡೆಯುತ್ತಿದೆ. ಇತ್ತ ರಾಯಚೂರು ಜಿಲ್ಲೆಯ ಸಚಿವ ಸ್ಥಾನಕ್ಕೆ ಪೈಪೋಟಿ ನಡೆದಿದೆ. ಈ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Body:ವಾಯ್ಸ್ ಓವರ್.೧: ೧೪ ತಿಂಗಳ ಕಾಲ ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಸರಕಾರ ಆಡಳಿತ ಪತನ ಬಳಿಕ, ನೂತನವಾಗಿ ಬಿಜೆಪಿ ಸರಕಾರ ಆಸ್ತಿತ್ವಕ್ಕೆ ಬಂದಿದೆ. ೧೪ ನಡೆದ ಆಡಳಿತಾವಧಿಯಲ್ಲಿ ಸಚಿವ ಪೈಪೋಟಿಯಲ್ಲಿ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಒಲಿದು ಬಂದಿತ್ತು. ಇದೀಗ ರಾಜ್ಯದಲ್ಲಿ ನೂತನವಾಗಿ ಆಡಳಿತ ಚುಕ್ಕಾಣಿ ಈಡೇದಿರುವ ಬಿಜೆಪಿ ಸರಕಾರ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ವಾಯ್ಸ್ ಓವರ್.೨: ಇನ್ನು ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ೪ನೇ ಬಾರಿಗೆ ಶಾಸಕರಾಗಿ‌ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ ಬಳಿಕ ರಾಜ್ಯದಲ್ಲಿ ಬಿಜೆಪಿಯಿಂದ ಶುರುಮಾಡಿದ ಅಪರೇಷನ್ ಕಮಲಕ್ಕೆ ಒಳಗಾಗಿ, ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಳಿಕ ನಡೆದ ಮರುಚುನಾವಣೆ ಗೆಲುವು ಸಾಧಿಸಿ, ಅನಾಸಯವಾಗಿ ಸಚಿವ ಸ್ಥಾನ ಪಡೆದುಕೊಂಡರು. ಆದ್ರೆ ಈ ಬಾರಿ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿದೆ. ಯಾಕೆಂದರೆ ಕಾಂಗ್ರೆಸ್ ಅತೃಪ್ತ ಶಾಸಕರಲ್ಲಿ ಗುರುತಿಸಿಕೊಂಡಿದ   ಶಾಸಕ ಸ್ಥಾನದಿಂದ ಅನರ್ಹಗೊಂಡ ಶಾಸಕ ಪ್ರತಾಪ್‌ಗೌಡ ಪಾಟೀಲ್ ಅಪರೇಷನ್ ಕಮಲಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿದೆ. ಆದ್ರೆ ಸದ್ಯ ಸ್ಪೀಕರ್ ಪಕ್ಷಾಂತರ ಕಾಯಿದೆಯಡಿಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಪ್ರತಾಪ್‌ಗೌಡರಿಗೆ ಸಚಿವ ಸಿಗುತ್ತದೆ ಇಲ್ಲವೊ ಎನ್ನುವ ಗೊಂದಲ ಮೂಡಿದೆ.

Conclusion:ವಾಯ್ಸ್ ಓವರ್.೩: ಇನ್ನು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೆ.ಶಿವನಗೌಡ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ವೇಳೆ ಪಾದಯಾತ್ರೆ ನಡೆಸಿ, ಮೈತ್ರಿ ಸರಕಾರದ ವಿರೋಧ ತೀವ್ರ ವಾಗ್ದಾಳಿ ನಡೆಸಿ, ಮೈತ್ರಿ ಸರಕಾರ ಪತನವಾಗುತ್ತದೆ ಎಂದು ಪದೇ ಪದೇ ಹೇಳುವ ಮೂಲಕ ಬಾರಿ ಪ್ರಚಾರ ಪಡೆದುಕೊಂಡಿದರು. ಇದೀಗ ನೂತನವಾಗಿ ತಮ್ಮ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬೆಂಗಳೂರಿನಲ್ಲಿ ಬಿಡಾಡ ಹೂಡಿರುವ ಶಾಸಕರು ಸಚಿವ ಸ್ಥಾನಕ್ಕೆ ಬಾರಿ ಪೈಪೋಟಿ ನಡೆಸಿದ್ದಾರೆ. ಅಲ್ಲದೇ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ‌ಒತ್ತಾಯಿಸಿದ್ರೆ. ಒಟ್ಟಿನಲ್ಲಿ, ಮೈತ್ರಿ ಸರಕಾರದಲ್ಲಿ ಸಚಿವ ಗಿಟ್ಟಿಸಿಕೊಂಡಿದ ರಾಯಚೂರು ಜಿಲ್ಲೆಯ ಈಗ, ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ‌ ಗಿಟ್ಟಿಸಿಕೊಳ್ಳುವ ಸಾಧ್ಯತೆಯಿದ್ದರೂ, ತೀವ್ರ ಪೈಪೋಟಿ ನಡೆದಿದ್ದು, ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎನ್ನುವುದು ಸದ್ಯ ಕುತೂಹಾಲ ಮೂಡಿಸಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.