ETV Bharat / state

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ: 26 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

author img

By ETV Bharat Karnataka Team

Published : Nov 27, 2023, 5:39 PM IST

jobs in Raichur District Court for peon and typist post
jobs in Raichur District Court for peon and typist post

District Court Recruitment: ಬೆರಳ್ಳಚ್ಚುಗಾರ, ಜವಾನ ಸೇರಿದಂತೆ ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆರಳ್ಳಚ್ಚುಗಾರ, ಜವಾನ ಸೇರಿದಂತೆ ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ: ರಾಯಚೂರು ಜಿಲ್ಲಾ ನ್ಯಾಯಾಲಯದಿಂದ ಅರ್ಜಿ ಆಹ್ವಾನಿಸಲಾದ ಒಟ್ಟು 26 ಹುದ್ದೆಗಳ ಮಾಹಿತಿ ಇಂತಿದೆ.

ಅಧಿಸೂಚನೆ
ಅಧಿಸೂಚನೆ
  • ಸ್ಟೆನೋಗ್ರಾಫರ್ ಗ್ರೇಡ್​ 3 - 1
  • ಟೈಪಿಸ್ಟ್​​ - 8
  • ಟೈಪಿಸ್ಟ್​- ಕಾಪಿಸ್ಟ್ - ​ 1
  • ಪ್ರೊಸೆಸ್​ ಸರ್ವರ್​​ - 5
  • ಜವಾನ - 10
  • ಚಾಲಕ - 1

ವಿದ್ಯಾರ್ಹತೆ: ಜವಾನ, ಚಾಲಕರ ಹುದ್ದೆ ಹೊರಾತಾಗಿ ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪರೀಕ್ಷೆಯಲ್ಲಿ ಟೈಪಿಂಗ್​ ಮತ್ತು ಶೀಘ್ರ ಲಿಪಿಗಾರ ಪರೀಕ್ಷೆಯಲ್ಲಿ ಸಿನಿಯರ್​​​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜವಾನ ಮತ್ತು ಚಾಲಕರ ಹುದ್ದೆಗೆ 10ನೇ ಪರೀಕ್ಷೆ ಉತ್ತೀರ್ಣರಾಗಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಟೈಪಿಂಗ್​ ಪರೀಕ್ಷೆ, ಕಂಪ್ಯೂಟರ್​ ಸಾಕ್ಷರತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ನವೆಂಬರ್​ 22ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 21 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು raichur.dcourts.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಕೊಡಗು ಜಿಲ್ಲಾ ನ್ಯಾಯಾಲಯ ನೇಮಕಾತಿ; ಟೈಪಿಸ್ಟ್​, ಜವಾನ ಸೇರಿದಂತೆ 64 ಹುದ್ದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.