ETV Bharat / state

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹಿಸಿ ಧರಣಿ

author img

By

Published : Jan 27, 2021, 4:58 PM IST

ರಾಜ್ಯದಲ್ಲಿ ಮದ್ಯಪಾನ ನಿಷೇಧ ಮಾಡುವಂತೆ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದ್ದು, ಕೂಡಲೇ ಸರ್ಕಾರ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಮದ್ಯ ನಿಷೇಧ ಆಂದೋಲನ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದರು.

Dharani Satyagraha
ಆಂದೋಲನ ಸಂಘಟನೆ ಕಾರ್ಯಕರ್ತರ ಧರಣಿ ಸತ್ಯಾಗ್ರಹ

ರಾಯಚೂರು: ರಾಜ್ಯದಲ್ಲಿ ಮದ್ಯಪಾನ ಮಾರಾಟ ನಿಷೇಧ ಮಾಡುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಮದ್ಯ ನಿಷೇಧ ಆಂದೋಲನ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದರು.

ಆಂದೋಲನ ಸಂಘಟನೆ ಕಾರ್ಯಕರ್ತರಿಂದ ಧರಣಿ

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯದಲ್ಲಿ ಮದ್ಯಪಾನ ನಿಷೇಧ ಮಾಡುವಂತೆ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಆದ್ರೆ ಮದ್ಯಪಾನ ಮಾರಾಟವನ್ನು ಸರ್ಕಾರ ನಿಷೇಧ ಮಾಡುತ್ತಿಲ್ಲ. ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಬೇಕು. ಮದ್ಯಪಾನ ಸೇವನೆಯಿಂದ ಮೃತಪಟ್ಟವರಿಗೆ ಪರಿಹಾರ ಧನ ಘೋಷಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಒತ್ತಾಯಿಸಿ ನ್ಯಾಯಾಲಯದ ಮೋರೆ ಹೋದ ವೇಳೆ ಅಕ್ರಮ ಮದ್ಯ ಮಾರಾಟ ತಡೆಯಲು ಸೂಚಿಸಲಾಗುವುದು ಎಂದು ಸರ್ಕಾರ‌ ಹೇಳಿತ್ತು. ಆದರೆ ಈಗ ಬಹುತೇಕ ಕಡೆ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಹೀಗಾಗಿ ಕೂಡಲೇ ಸರ್ಕಾರ ಅಕ್ರಮ ಮದ್ಯ ಮಾರಾಟ ತಡೆಯುವಂತೆ ಪ್ರತಿಭಟನಾಕಾರರು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.