ETV Bharat / state

ರಾಯಚೂರು ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸಿದ ಬಿಜೆಪಿ

author img

By

Published : Apr 12, 2023, 9:52 AM IST

ರಾಯಚೂರು ಜಿಲ್ಲೆ ಬಿಜೆಪಿ ಅಭ್ಯರ್ಥಿಗಳು
ರಾಯಚೂರು ಜಿಲ್ಲೆ ಬಿಜೆಪಿ ಅಭ್ಯರ್ಥಿಗಳು

ರಾಯಚೂರು ಜಿಲ್ಲೆ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಮಾನವಿ ಹೊರತುಪಡಿಸಿ ಉಳಿದ ಆರು ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ.

ರಾಯಚೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ. ಘೋಷಣೆಯಾದ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳ ಅಭ್ಯರ್ಥಿಗಳ ಮಾತ್ರ ಅಂತಿಮಗೊಳಿಸಿದ್ದು, ಒಂದು ಕ್ಷೇತ್ರ ಪೆಂಡಿಂಗ್​ ಇರಿಸಿದೆ. ರಾಯಚೂರು ನಗರ, ರಾಯಚೂರು ಗ್ರಾಮೀಣ, ಮಾನವಿ, ಸಿಂಧನೂರು, ಮಸ್ಕಿ, ಲಿಂಗಸೂಗುರು ಹಾಗೂ ದೇವದುರ್ಗ ಏಳು ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ರಾಯಚೂರು ನಗರಕ್ಕೆ ಹಾಲಿ ಶಾಸಕ ಡಾ. ಶಿವರಾಜ್ ಪಾಟೀಲ್, ರಾಯಚೂರು ಗ್ರಾಮೀಣ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್, ಸಿಂಧನೂರು ಕ್ಷೇತ್ರಕ್ಕೆ ಕೆ. ಕರಿಯಪ್ಪ, ಮಸ್ಕಿಗೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಲಿಂಗಸೂಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್, ದೇವದುರ್ಗಕ್ಕೆ ಹಾಲಿ ಶಾಸಕ ಕೆ. ಶಿವನಗೌಡ ನಾಯಕರಿಗೆ ತನ್ನ ಹುರಿಯಾಳುಗಳಾನ್ನಾಗಿ ಕಣಕ್ಕಿಳಿಸಿದೆ.

ಆದರೆ, ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿಯನ್ನು ಘೋಷಣೆ ಮಾಡದೆ ಇರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಮಾನ್ವಿಯ ಬಿಜೆಪಿ ಮುಖಂಡ ಗಂಗಾಧರ ನಾಯಕ ಇಲ್ಲಿಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರನ್ನು ಮೊದಲ ಹಂತದದಲ್ಲಿ ಪಕ್ಷ ಪರಿಗಣಿಸಿಲ್ಲ. ಅಲ್ಲದೆ ಬೇರೆ ಅಭ್ಯರ್ಥಿಯ ಹುಡುಕಾಟ ನಡೆಸಿದೆ ಎನ್ನಲಾಗಿದೆ. ಜೊತೆಗೆ ಕಾಂಗ್ರೆಸ್​ ಪಕ್ಷದಿಂದಲೂ ಅಭ್ಯರ್ಥಿಯ ಟಿಕೆಟ್ ಘೋಷಣೆ ಆಗಿಲ್ಲ. ಹೀಗಾಗಿ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಸಿಗದೆ ಅಸಮಾಧಾನಗೊಂಡವರನ್ನು ಗಾಳ ಹಾಕಿ ಕರೆತರುವ ಸಾಧ್ಯತೆಯಿದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಇದನ್ನೂ ಓದಿ: ಸವದಿ ಅವರನ್ನು ಕಡೆಗಣಿಸಿಲ್ಲ.. ಮನವೊಲಿಕೆ ಮಾಡುತ್ತೇವೆ: ಶೋಭಾ ಕರಂದ್ಲಾಜೆ

ಘೋಷಣೆಯಾದ ಅಭ್ಯರ್ಥಿಗಳಲ್ಲಿ ಇಬ್ಬರು ಹಾಲಿ ಶಾಸಕರಿದ್ದು, ಮೂವರು ಮಾಜಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್​ ಘೋಷಣೆಯಾದಂತಹ ಬಿಜೆಪಿಯ ಮಾಜಿ ಶಾಸಕರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿ ಎರಡನೇ ಸ್ಥಾನದಲ್ಲಿದ್ದರು. ಹೀಗಾಗಿ ಈ ಬಾರಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದ್ದ ಕಾರಣ ಪಕ್ಷ ಅವರಿಗೆ ಮತ್ತೊಮ್ಮೆ ಅವಕಾಶವನ್ನು ನೀಡುವ ಮೂಲಕ ಅಖಾಡಕ್ಕಿಳಿಸಿದೆ. ಇನ್ನು ಸಿಂಧನೂರು ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕೆ. ಕರಿಯಪ್ಪ ಈ ಹಿಂದೆ ಕಾಂಗ್ರೆಸ್​ನಲ್ಲಿದ್ದರು.

ಸಿಂಧನೂರು ಕ್ಷೇತ್ರದ ಕಾಂಗ್ರೆಸ್​ನ ಪ್ರಬಲ ಟಿಕೆಟ್ ಆಕಾಂಕ್ಷಿಗಳೂ ಆಗಿದ್ದರು. ಆದರೆ ಪಕ್ಷದಲ್ಲಿ ಟಿಕೆಟ್ ಸಿಗದೆ ಇರುವುದರಿಂದ ಅಸಮಾಧಾನಗೊಂಡು ಕೈಬಿಟ್ಟು ಬಿಜೆಪಿ ಪಾಳಯ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆ ಅವರನ್ನು ಸಿಂಧನೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಹೈಕಮಾಂಡ್ ಫೈನಲ್ ಮಾಡಿ ಹೆಸರನ್ನು ಘೋಷಣೆ ಮಾಡಿದೆ. ರಾಯಚೂರು ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ ಆರು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಪಕ್ಷ ಪ್ರಕಟಿಸಿದ್ದು, ಚುನಾವಣೆ ಅಖಾಡವನ್ನು ರಂಗೇರಿಸಿದೆ.

ಇದನ್ನೂ ಓದಿ: ಮೊದಲ ಪಟ್ಟಿಯೇ ಗೆಲುವಿಗೆ ದಿಕ್ಸೂಚಿ, ಇನ್ನೆರಡು ದಿನದಲ್ಲಿ ಎರಡನೇ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಶಿವಮೊಗ್ಗ ನಗರ ಹೊರತುಪಡಿಸಿ 6 ಕ್ಷೇತ್ರಗಳಿಗೆ ಟಿಕೆಟ್ ಫೈನಲ್.. ಸೊರಬದಲ್ಲಿ ಮತ್ತೆ ಸಹೋದರರ ಸವಾಲ್​ ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.