ETV Bharat / state

ರಾಯಚೂರು: ಐದು ವರ್ಷದ ಬಾಲಕಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆ

author img

By

Published : Dec 12, 2022, 2:15 PM IST

ಬಾಲಕಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದ್ದು, ಡೆಂಗ್ಯೂ ಮಾದರಿಯ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ.

suspected-zika-virus-detected-in-five-year-old-girl
ರಾಯಚೂರು: ಐದು ವರ್ಷದ ಬಾಲಕಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆ

ರಾಯಚೂರು: ಐದು ವರ್ಷದ ಬಾಲಕಿಯೋರ್ವಳಿಗೆ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ. ಜಿಲ್ಲೆಯ ಮಾನವಿ ತಾಲೂಕಿನ ಕೋಳಿ ಕ್ಯಾಂಪ್​ನಲ್ಲಿ ಈ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೋಳಿ ಕ್ಯಾಂಪ್ ನಿವಾಸಿಯೊಬ್ಬರ ನಾಗರಾಜ ಅವರ ಪುತ್ರಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ.

ಕೆಲ ದಿನಗಳ ಹಿಂದೆ ಬಾಲಕಿಗೆ ಜ್ವರ, ನೆಗಡಿ ಕೆಮ್ಮು, ಸೇರಿದಂತೆ ಅನಾರೋಗ್ಯ ಉಂಟಾಗಿತ್ತು. ಈ ವೇಳೆ, ಪೋಷಕರು ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆಗಾಗಿ ತೋರಿಸಿದ್ದರು. ಅಲ್ಲಿನ ವೈದ್ಯರು ಸಿಂಧನೂರಿಗೆ ಚಿಕಿತ್ಸೆಗೆ ತೆರಳುವಂತೆ ಹೇಳಿದ್ದರು. ಅಲ್ಲಿನ ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ, ಬಾಲಕಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದ್ದು, ಡೆಂಗ್ಯೂ ಮಾದರಿಯ ಶಂಕಿತ ಝಿಕಾ ವೈರಸ್ ಪತ್ತೆಯಾಗಿದೆ. ಇದಾದ ಬಳಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕಿ ಚಿಕಿತ್ಸೆಯಿಂದ ಗುಣಮುಖವಾಗುತ್ತಿದ್ದಾಳೆ.

suspected-zika-virus-detected-in-five-year-old-girl
ರಾಯಚೂರು: ಐದು ವರ್ಷದ ಬಾಲಕಿಯಲ್ಲಿ ಶಂಕಿತ ಝಿಕಾ ವೈರಸ್ ಪತ್ತೆ

ಶಂಕಿತ ಝಿಕಾ ವೈರಸ್ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಕೇಂದ್ರ ತಂಡ, ತಾಲೂಕು ವೈದ್ಯಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಬಾಲಕಿ ಮನೆಯಲ್ಲಿ ಆಕೆಯನ್ನು ಬಿಟ್ಟು ಮತ್ತೆಲ್ಲರೂ ಆರೋಗ್ಯವಾಗಿದ್ದಾರೆ. ಆದರೆ, ಮುಂಜಾಗ್ರತ ಕ್ರಮವಾಗಿ ಮನೆಯವರ ಆರೋಗ್ಯ ಪರೀಕ್ಷೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಇನ್ನು ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೇ ಆರೋಗ್ಯ ಇಲಾಖೆಯಿಂದ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಸ್ಟಿಂಗ್ ಆಪರೇಷನ್ ನಡೆಸಿದ ಕೊರಟಗೆರೆ ತಹಶೀಲ್ದಾರ್: ಆ್ಯಂಬುಲೆನ್ಸ್​​ ಸಿಬ್ಬಂದಿ ನಿರ್ಲಕ್ಷ್ಯ ಬಯಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.