ETV Bharat / state

ಕ್ರೂಷರ್ ವಾಹನಕ್ಕೆ ಲಾರಿ ಡಿಕ್ಕಿ: ಇಬ್ಬರು ಸಾವು

author img

By

Published : Feb 28, 2022, 1:47 PM IST

ಅಪಘಾತ
ಅಪಘಾತ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ಕ್ರೂಷರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ರಾಯಚೂರು: ನಿಂತ ಕ್ರೂಷರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮಲ್ಲಟ ಗ್ರಾಮದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿರೂಪಾಕ್ಷ(35), ಹುಸೇನಿ (45) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಸ್ತೆ ಬದಿಯಲ್ಲಿ ಕ್ರೂಷರ್ ವಾಹನ ನಿಲ್ಲಿಸಿಕೊಂಡು ಅಲ್ಲಿಯೇ ಇಬ್ಬರು ವ್ಯಕ್ತಿಗಳು ನಿಂತಿದ್ದ ವೇಳೆ ಏಕಾಏಕಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಸಿರವಾರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.