ETV Bharat / state

ರಾಮನಗರದಲ್ಲಿ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ‌ಯತ್ನ: ಮೂವರು ಸಾವು, ಮಗಳು ಪಾರು

author img

By

Published : Dec 22, 2021, 11:25 AM IST

Updated : Dec 22, 2021, 12:17 PM IST

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

Ramnagar
ಸುಮಿತ್ರಾ ಮತ್ತು ಹನುಮಂತ ರಾಜು

ರಾಮನಗರ: ಕೌಟುಂಬಿಕ ‌ಕಲಹ ಹಿನ್ನೆಲೆ ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ‌ಯತ್ನಿಸಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ‌ಯತ್ನ: ಮೂವರು ಸಾವು

ಗ್ರಾಮದ ಸಿದ್ದಮ್ಮ(55), ಆಕೆಯ ಮಗಳು ಸುಮಿತ್ರಾ (30) ಮತ್ತು ಅಳಿಯ‌ ಹನುಮಂತ ರಾಜು(35) ಮೃತರು. ಬಾಲಕಿ ಕೀರ್ತನಾ (11) ಸ್ಥಿತಿ ಕೂಡ ಗಂಭೀರವಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ramnagar
ಹನುಮಂತ ರಾಜು, ಸುಮಿತ್ರಾ ಮತ್ತು ಸಿದ್ದಮ್ಮ ಸಾವು

ಒಟ್ಟು ಐವರು ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದರು. ಆದರೆ ಅವರಲ್ಲಿ ಮೃತ ಸುಮಿತ್ರಾಳ 10 ವರ್ಷದ ಮಗಳು ಅಲ್ಲಿಂದ ತಪ್ಪಿಸಿಕೊಂಡು ಬಂದು ಗ್ರಾಮಸ್ಥರಿಗೆ ಆತ್ಮಹತ್ಯೆ ವಿಷಯ ತಿಳಿಸಿದ್ದಾಳೆ. ಕೂಡಲೇ ಗ್ರಾಮಸ್ಥರು ಬಾಲಕಿಯನ್ನು ರಕ್ಷಿಸಿದ್ದಾರೆ. ಉಳಿದ ಮೂವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮನೆ ಅಳಿಯನಾಗಿದ್ದ ಹನುಮಂತ ರಾಜು ಗ್ರಾಮದಲ್ಲಿ ವ್ಯವಸಾಯ ಮಾಡುತ್ತಿದ್ದ. ಪ್ರತಿದಿನ ಕುಡಿದು ಬಂದು ಜಗಳ ಆಡುತ್ತಿದ್ದನಂತೆ. ಕೌಟುಂಬಿಕ ಸಮಸ್ಯೆಯಿಂದ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತೆರಳಿ ಕುಟುಂಬಸ್ಥರೆಲ್ಲರೂ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ.

ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿಡಿಯೋ ಕಾನ್ಫರೆನ್ಸ್​ ವಿಚಾರಣೆ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ: ವಕೀಲ ಅಮಾನತು

Last Updated :Dec 22, 2021, 12:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.