ಸಿಪಿವೈ ಕಾರಿಗೆ ಕಲ್ಲು ತೂರಾಟ ಸಿಎಂ ಬೊಮ್ಮಾಯಿ‌, ಸಚಿವ ಅಶ್ವತ್ಥ್ ನಾರಾಯಣ್ ಖಂಡನೆ

author img

By

Published : Oct 1, 2022, 5:54 PM IST

Etv Bharateggs-and-stones-thrown-at-c-p-yogeshwara car

ಬೈರಾಪಟ್ಟಣ ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆ ವಿಕೋಪಕ್ಕೆ ಹೋಗಿದ್ದು , ಸಿ ಪಿ ಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ ಹಾಗೂ ಕಲ್ಲನ್ನು ಜೆಡಿಎಸ್ ಕಾರ್ಯಕರ್ತರು ಎಸೆದಿದ್ದಾರೆ. ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್​ ನಡೆಸಿದ್ದಾರೆ.

ಬೆಂಗಳೂರು: ರಾಮನಗರದಲ್ಲಿ ಎಂಎಲ್​ಸಿ ಸಿ ಪಿ ಯೋಗಿಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿರುವುದನ್ನು ಸಿಎಂ ಬೊಮ್ಮಾಯಿ ಮತ್ತು ರಾಮನಗರ ಜಿಲ್ಲೆ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗಿಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ. ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರೆಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.

  • ಇಂದು ರಾಮನಗರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ. ಪಿ. ಯೋಗಿಶ್ವರ್ ಅವರ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದಿರುವುದು ಸರಿಯಲ್ಲ, ಈ ದಾಳಿಯನ್ನು ನಾನು ಕಟುವಾಗಿ ಖಂಡಿಸುತ್ತೇನೆ. ವಿಷಯಗಳು ಏನೇ ಇರಲಿ ಅದನ್ನು ಕಾನೂನಾತ್ಮಕವಾಗಿ ಬಗೆಹರೆಸಿಕೊಳ್ಳಬೇಕು ಮತ್ತು ಯಾರು ಕಾನೂನು ಕೈಗೆತ್ತಿಕೊಳ್ಳಬಾರದು.

    — Basavaraj S Bommai (@BSBommai) October 1, 2022 " class="align-text-top noRightClick twitterSection" data=" ">

ಮಾಜಿ ಸಿಎಂ ಹಾಗೂ ಚನ್ನಪಟ್ಟಣ ಶಾಸಕ ಹೆಚ್​ ಡಿ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಸ್ವತಃ ಕುಮಾರಸ್ವಾಮಿ ಅವರನ್ನು ದೂರವಿಟ್ಟು ಶಂಕುಸ್ಥಾಪನೆ ನೆರವೇರಿಸಿದಕ್ಕೆ ಜೆಡಿಎಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಜೆಡಿಎಸ್ ಕಾರ್ಯಕರ್ತರು ಸಿ.ಪಿ.ಯೋಗೀಶ್ವರ್ ಕಾರಿಗೆ ಕಲ್ಲು ಹಾಗೂ ಮೊಟ್ಟೆ ತೂರಾಟ ಮಾಡಿದ್ದರು.

ಎಚ್ ಡಿ ಕೆ ವಾಮಮಾರ್ಗ: ಇತ್ತ ರಾಮನಗರ ಜಿಲ್ಲೆ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ಕಿಡಿಕಾರಿರುವ ಅವರು, ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಎಚ್ ಡಿ ಕೆ ಅವರು 'ವಾಮ ಮಾರ್ಗ' ಅನುಸರಿಸುತ್ತಿರುವುದು ಖಂಡನೀಯ. 'ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು' ಎಂಬ ಸಿದ್ಧಾಂತಕ್ಕೆ ಕಟ್ಟುಬೀಳುವ ಬದಲು ನಾವು ಮಾಡುತ್ತಿರುವ ಜನಪರ ಕಾರ್ಯಗಳನ್ನು ಬೆಂಬಲಿಸಿ ಎಂದು ಟೀಕಿಸಿದ್ದಾರೆ.

  • ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ @BJP4Karnataka ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು @hd_kumaraswamy ಅವರು 'ವಾಮ ಮಾರ್ಗ' ಅನುಸರಿಸುತ್ತಿರುವುದು ಖಂಡನೀಯ.

    'ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು' ಎಂಬ ಸಿದ್ಧಾಂತಕ್ಕೆ ಕಟ್ಟುಬೀಳುವ ಬದಲು ನಾವು ಮಾಡುತ್ತಿರುವ ಜನಪರ ಕಾರ್ಯಗಳನ್ನು ಬೆಂಬಲಿಸಿ.

    1/2

    — Dr. Ashwathnarayan C. N. (@drashwathcn) October 1, 2022 " class="align-text-top noRightClick twitterSection" data=" ">

ಕುಮಾರಸ್ವಾಮಿ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ. ಇದ್ದಷ್ಟು ದಿನ ಎಷ್ಟು ಜನಪರ ಕೆಲಸ ಮಾಡಿದ್ದೇವೆ ಎಂಬುದಷ್ಟೇ ಶಾಶ್ವತವಾಗಿ ಉಳಿಯುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿವೆ ಎಂಬುದು ನಿಮಗೂ ತಿಳಿದಿದೆ. ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಿ ಪಿ ಯೋಗೇಶ್ವರ್ ಮೇಲೆ ಮೊಟ್ಟೆ, ಕಲ್ಲು ಎಸೆದ ಜೆಡಿಎಸ್ ಕಾರ್ಯಕರ್ತರು.. ಪೊಲೀಸರಿಂದ ಲಾಠಿಚಾರ್ಜ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.