ETV Bharat / state

ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ, ಕಲ್ಲು ತೂರಾಟ.. ಕಾಮಸಾಗರ ಪ್ರಕ್ಷುಬ್ಧ

author img

By

Published : Nov 3, 2022, 2:20 PM IST

Updated : Nov 3, 2022, 2:47 PM IST

ಹಾಲಿನ ಡೈರಿ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ‌ಕಾರ್ಯಕರ್ತರ ನಡುವೆ ಉಂಟಾದ ವಾಕ್ಸಮರ ಅತಿರೇಕಕ್ಕೆ ತಿರುಗಿದೆ. ಇದರಿಂದ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾದ ಘಟನೆ ರಾಮನಗರ ಜಿಲ್ಲೆ ಕಾಮಸಾಗರ ಗ್ರಾಮದಲ್ಲಿ ಗುರುವಾರ ನಡೆದಿದೆ.

Milk dairy inauguration A spat broke out between JDS and Congress
ಹಾಲಿನ ಡೈರಿ ಉದ್ಘಾಟನೆ ವೇಳೆ ಜೆಡಿಎಸ್ ಕಾಂಗ್ರೆಸ್ ನಡುವೆ ವಾಕ್ಸಮರ

ರಾಮನಗರ: ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟದ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ‌ಕಾರ್ಯಕರ್ತರ ನಡುವೆ ಉಂಟಾದ ವಾಕ್ಸಮರ ಅತಿರೇಕಕ್ಕೆ ತಿರುಗಿದ ಪರಿಣಾಮ ಮಾಜಿ ಶಾಸಕ ಹೆಚ್ ಸಿ ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕಾರ್ಯಕ್ರಮ ಉದ್ಘಾಟನೆಗೆ ಮೊದಲು ಬಂದಿದ್ದ‌ ಮಾಜಿ ಶಾಸಕ ಬಾಲಕೃಷ್ಣ ಅವರಿಗೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಮತ್ತೊಂದೆಡೆ ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದರು. ಇದೇ ವಿಚಾರಕ್ಕೆ ಕಾಂಗ್ರೆಸ್ ‌ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಯಿತು.

ಜೆಡಿಎಸ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಬಾಲಕೃಷ್ಣ ಕಾರ್ಯಕ್ರಮ ಮುಗಿಸಿ ಹೋಗುವ ವೇಳೆ ಕಾರಿನ ಮೇಲೆ ಕೆಲವರು ಕಲ್ಲು ತೂರಿದ್ದಾರೆ. ಈ ವೇಳೆ ಶಿಷ್ಟಾಚಾರ ಪಾಲಿಸಿಲ್ಲ ಆರೋಪಿಸಿದ ಜೆಡಿಎಸ್ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಮಂಜುನಾಥ್ ಹೆಸರು ಕೊನೆಯಲ್ಲಿ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಈ ವೇಳೆ ಸ್ಥಳಕ್ಕೆ ‌ಕೂದುರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಡಿಕೆಶಿ ಆಹ್ವಾನ ತಿರಸ್ಕರಿಸಿ ಬೇಷರತ್ತಾಗಿ ಬಿಜೆಪಿ ಸೇರಿದ ಮುದ್ದಹನುಮೇಗೌಡ: ಪಕ್ಷ ಸಂಘಟನೆಗೆ ಪಣ ತೊಟ್ಟ ಶಶಿಕುಮಾರ್

Last Updated : Nov 3, 2022, 2:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.