ನಿಖಿಲ್ ಕುಮಾರಸ್ವಾಮಿ ಪುತ್ರ ಆವ್ಯಾನ್ ಜನ್ಮದಿನ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ

author img

By

Published : Sep 24, 2022, 10:57 PM IST

nikhil-kumarswamy-sons-birthday

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುತ್ರ ಆವ್ಯಾನ್ ದೇವ್ 1 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ರಾಮನಗರದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ರಾಮನಗರ : ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುತ್ರ ಆವ್ಯಾನ್ ದೇವ್ 1 ನೇ ವರ್ಷದ ಹಟ್ಟುಹಬ್ಬದ ಅಂಗವಾಗಿ ರಾಮನಗರದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.

ರಾಮನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ತಾಯಿಗೆ ಶಾಸಕಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ನಿಖಿಲ್ ಪತ್ನಿ ರೇವತಿ ಜೊತೆಗೂಡಿ ಪೂಜೆ ಸಲ್ಲಿಸಲಾಯಿತು. ಬಳಿಕ ಜೆಡಿಎಸ್​ ಕಾರ್ಯಕರ್ತರ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ ಅವ್ಯಾನ್ ದೇವ್ ಕೈಯಲ್ಲಿ ಕೇಕ್ ಕಟ್ ಮಾಡಿಸಿ, ಪಟಾಕಿ ಸಿಡಿಸಿ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನನ್ನ ಮಗ ಹುಟ್ಟಿ ಇಂದಿಗೆ ಒಂದು ವರ್ಷ ಪೂರೈಸಿದೆ. ತಂದೆ ತಾಯಿ ನಂಬಿರುವ ದೇವಿಯ ಕೃಪೆಗೆ ಬಂದಿದ್ದೇನೆ. ರಾಮನಗರದ ಶ್ರೀ ಚಾಮುಂಡೇಶ್ವರಿ ತಾಯಿಯ ಆಶಿರ್ವಾದಕ್ಕಾಗಿ ಮಗನ ಜೊತೆ ಆಗಮಿಸಿದ್ದೇವೆ. ನಾನು ಏನು ವಿಶೇಷವಾಗಿ ಏನು ಕೇಳಿಕೊಂಡಿಲ್ಲ. ನನ್ನ ತಾತ, ತಂದೆ ತಾಯಿ ಮಾಡಿರುವಂತೆ ಜನ ಸೇವೆ ಮಾಡಬೇಕು. ಜನರ ಸೇವೆಯಲ್ಲಿಯೇ ದೇವರನ್ನು ಕಾಣಬೇಕು ಎಂದು ಹೇಳಿದರು.

ಜನ ಸೇವೆ ಮಾಡುವುದಕ್ಕೆ ನಮ್ಮ ಜೀವನ ಮೀಸಲಿಡಬೇಕಿದೆ. ಇದು ನಮ್ಮ ತಂದೆ ಮಾಜಿ ಸಿಎಂ ಹೆಚ್‌ಡಿಕೆ ಹಾಗೂ ನಮ್ಮ ತಾತ ಮಾಜಿ ಪ್ರಧಾನಿ ದೇವೇಗೌಡರ ಆಶಯ. ಅವರ ಆಶಯದಂತೆ ನಾವುಗಳು ನಡೆಯುತ್ತಿದ್ದೇವೆ. ಅವ್ಯಾನ್ ಅಂದ್ರೆ ವಿಷ್ಣು ದೇವರ ಹೆಸರು, ದೇವ್ ಅಂದ್ರೆ ನನ್ನ ತಾತನ ಹೆಸರು ಇಟ್ಟಿದ್ದೇವೆ ಎಂದು ಹೇಳಿದರು.

ಈ ಬಾರಿ ನಿಖಿಲ್ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಈಗಲೇ ಅದರ ಬಗ್ಗೆ ಪ್ರಸ್ತಾಪ ಮಾಡುವುದಿಲ್ಲ. 123 ಮಿಷನ್ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಅದರ ಬಗ್ಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ‌. ಆದರೆ ಪಂಚರತ್ನದ ಬಗ್ಗೆ ಜನರಿಗೆ ಮಾಹಿತಿ ನೀಡಲು ರಥೋತ್ಸವದ ಮೂಲಕ ಚಾಲನೆ ಸದ್ಯದಲ್ಲೇ ದೊರೆಯಲ್ಲಿದೆ. ನಾನು ಕೂಡ ಯುವಕರ ಸಂಘಟನೆ ಮಾಡುವ ಜವಬ್ದಾರಿ ಹೊಂದಿದ್ದೇನೆ. ಆ ಕೆಲಸವನ್ನು ನಾನು ಮಾಡುತ್ತೇನೆ. ಆದರೆ ನಾನು ಸ್ಪರ್ಧೆ ಮಾಡುವ ವಿಚಾರ ಇನ್ನೂ ಇಲ್ಲ ಎಂದರು.

ಇನ್ನು ಸಂಸದ ಪ್ರಜ್ವಲ್ ರೇವಣ್ಣ ಜಂಟಿಯಾಗಿ ಪಕ್ಷ ಸಂಘಟನೆ ಮಾಡುವ ವಿಚಾರವಾಗಿ, ನಾವು ಇಬ್ಬರೇ ಸಂಘಟನೆ ಮಾಡುವುದಲ್ಲ.ಮೈಸೂರಿನ ಜಿ.ಟಿ. ಹರೀಶ್, ಉತ್ತರ ಕರ್ನಾಟಕದ ಶರಣ್ ಗೌಡ ಸೇರಿದಂತೆ ಹಲವು ಯುವಕರು ಇದ್ದಾರೆ. ಎಲ್ಲರೂ ಸೇರಿ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುತ್ತೇವೆ. ಈ ಬಗ್ಗೆ ಹಲವು ಸಭೆ ಕೂಡ ಆಗಿದೆ. ಮುಂದಿನ ದಿನಗಳಲ್ಲಿ ಸಂಘಟನೆಗೆ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯೆ : ಅವ್ಯಾನ್ ದೇವ್ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಕುಟುಂಬದ ಎಲ್ಲರ ಹುಟ್ಟು ಹಬ್ಬದಂದು ದೇವಸ್ಥಾನಕ್ಕೆ ಭೇಟಿ ನೀಡುತ್ತೇವೆ. ಪತಿ ಕುಮಾರಸ್ವಾಮಿ ಹಾಗೂ ನನಗೆ ನಂಬಿಕೆ ಇರುವ ದೇಗುಲವಿದು. ತಾಯಿ ಚಾಮುಂಡೇಶ್ವರಿ ಅನುಗ್ರಹ ಇರಲಿ ಎಂದು ಇಲ್ಲಿಗೆ ಬಂದಿದ್ದೇವೆ ಎಂದರು.

ಭರಣಿ ನಕ್ಷತ್ರದವರು ಧರಣಿ ಆಳುತ್ತಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು, ನಾನು ದೇವರ ಬಳಿ ಏನೂ ಬೇಡಿಕೆ ಇಡುವುದಿಲ್ಲ. ಎಲ್ಲಾ ನಿನ್ನ ಪಾದಕ್ಕೆ ಅರ್ಪಿಸುತ್ತೇನೆ ಎಂದಿದ್ದೇನೆ ಎಂದು ಇದೇ ವೇಳೆ ಅನಿತಾ ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ : ದಸರಾ ಉದ್ಘಾಟನಾ ವೇದಿಕೆಯಲ್ಲಿ 13 ಗಣ್ಯರಿಗೆ ಅವಕಾಶ, ಯುವ ದಸರಾಗೆ ಕಿಚ್ಚ ಸುದೀಪ್ ಅಲಭ್ಯ: ಸಚಿವ ಸೋಮಶೇಖರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.