ETV Bharat / state

ರಾಮನಗರದಲ್ಲಿ ಯಾವುದೇ ವೈದ್ಯಕೀಯ ಸೌಲಭ್ಯಗಳ ಕೊರತೆಯಿಲ್ಲ: ಡಿಸಿ

author img

By

Published : May 14, 2021, 4:42 PM IST

ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್
ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್

ಕೋವಿಡ್ ಲಕ್ಷಣಗಳಿದ್ದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಿ. ಸ್ವಯಂ ಚಿಕಿತ್ಸೆ ಮಾಡಿಕೊಂಡು ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ಆಗಮಿಸುತ್ತಿರುವುದರಿಂದ ಹೆಚ್ಚಿನ‌ ಸಾವು ಸಂಭವಿಸುತ್ತಿವೆ. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಸರ್ಕಾರದ SOPಯಂತೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಗೆ ಹೆಚ್ಚು ಗಂಭೀರವಿರುವ ರೋಗಿಗಳನ್ನು ಚಿಕಿತ್ಸೆಗೆ ಕಳುಹಿಸಿಕೊಡಲಾಗುತ್ತದೆ ಎಂದು ರಾಮನಗರ ಡಿಸಿ ತಿಳಿಸಿದರು.

ರಾಮನಗರ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಆಕ್ಸಿಜನ್ ಬೆಡ್​​ಗಳ ಕೊರತೆಯಿಲ್ಲ. ವ್ಯವಸ್ಥಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 394 ಆಕ್ಸಿಜನೇಟೆಡ್ ಬೆಡ್​ಗಳಲ್ಲಿ 329, 71 ಐಸಿಯುಗಳಲ್ಲಿ 43, 39 ವೆಂಟಿಲೇಟರ್​​ಗಳಲ್ಲಿ 23 ಭರ್ತಿಯಾಗಿವೆ ಎಂದರು. ಕೈಗಾರಿಕೆಗಳಿಂದ 211 ಮೆಡಿಕಲ್ ಆಕ್ಸಿಜನ್ ಸಂಗ್ರಹಿಸುವ ಸಿಲಿಂಡರ್​​ಗಳನ್ನು ಪಡೆಯಲಾಗಿದೆ. ಇದನ್ನು ಸಂಗ್ರಹಿಸಿ ಬಫರ್ ಸ್ಟಾಕ್ ಆಗಿ ಹೆಚ್ಚುವರಿಯಾಗಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಇಡಲಾಗಿದೆ. ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕಿತ್ಸೆ ನೀಡಲು 15 ದಿನಗಳ ಕಾಲ ಸತತ ಕೆಲಸ ನಡೆಸಿ ಹೊಸ ಜಿಲ್ಲಾಸ್ಪತ್ರೆಯಲ್ಲಿ 131 ಬೆಡ್​ಗಳನ್ನು ಸಿದ್ಧಪಡಿಸಲಾಗುತ್ತಿದೆ. ಹೆಚ್ಚುವರಿಯಾಗಿ 10 ವೆಂಟಿಲೇಟರ್ ಸಿದ್ಧಪಡಿಸಲಾಗುತ್ತಿದೆ ಎಂದರು.

ಕೋವಿಡ್ ಲಕ್ಷಣಗಳಿದ್ದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಿ. ಸ್ವಯಂ ಚಿಕಿತ್ಸೆ ಮಾಡಿಕೊಂಡು ಕೊನೆಯ ಕ್ಷಣದಲ್ಲಿ ಆಸ್ಪತ್ರೆಗೆ ಆಗಮಿಸುತ್ತಿರುವುದರಿಂದ ಹೆಚ್ಚಿನ‌ ಸಾವು ಸಂಭವಿಸುತ್ತಿವೆ. ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಸರ್ಕಾರದ SOPಯಂತೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಗೆ ಹೆಚ್ಚು ಗಂಭೀರವಿರುವ ರೋಗಿಗಳನ್ನು ಚಿಕಿತ್ಸೆಗೆ ಕಳುಹಿಸಿಕೊಡಲಾಗುತ್ತದೆ. ಇದರಿಂದ ಸಾವು ಪ್ರಕರಣಗಳು ಹೆಚ್ಚು ಎಂಬ ಮನೋಭಾವವಿದೆ. ಉಪಮುಖ್ಯಮಂತ್ರಿಗಳು ಹಾಗೂ ಸಂಸದರೊಂದಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರತಿದಿನ 1,400ರಿಂದ 1,500 ಕೊವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ರೋಗ ಲಕ್ಷಣವುಳ್ಳವರು ಹಾಗೂ ಕೋವಿಡ್ ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪರೀಕ್ಷಿಸಲಾಗುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ಮಾತ್ರ R.A.T ಪರೀಕ್ಷೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಮೊದಲ ಮತ್ತು ಎರಡನೇ ಅಲೆ ಲೆಕ್ಕಾಚಾರ ಮಾಡಿದರೆ ಪಾಸಿಟಿವಿಟಿ ರೇಟ್ 3.94 ಇದ್ದು, ಕಳೆದ ಒಂದು ವಾರದಲ್ಲಿ ಪಾಸಿಟಿವಿಟಿ ರೇಟ್ 11% ಇದೆ. ಡೆತ್ ರೇಟ್ 1.06% ಇದೆ ಎಂದರು.

ಜಿಲ್ಲೆಯಲ್ಲಿ ಲಕ್ಷಣವಿಲ್ಲದ ಸೋಂಕಿತರು ಹಾಗೂ ಕಡಿಮೆ ಲಕ್ಷಣವುಳ್ಳವರಿಗೆ ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 4 ಕೋವಿಡ್ ಕೇರ್ ಸೆಂಟರ್​​ಗಳಲ್ಲಿ 405 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದ್ದು, 276 ಭರ್ತಿಯಾಗಿವೆ. ಅವಶ್ಯಕತೆ ಇದ್ದಲ್ಲಿ ಹೆಚ್ಚಿನ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು. 2,914 ಸೋಂಕಿತರಿಗೆ ಹೋಮ್ ಐಸೊಲೇಷನ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ‌. ಪ್ರತಿ ತಾಲೂಕಿನಲ್ಲಿ ಹೋಮ್ ಐಸೋಲೇಷನ್ ರೋಗಿಗಳ ಚಿಕಿತ್ಸೆಗಾಗಿ ಇಬ್ಬರು ಆರ್.ಬಿ.ಎಸ್.ಕೆ ವೈದ್ಯರನ್ನು ನಿಯೋಜಿಸಲಾಗಿದೆ. ರೋಗಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ವಾರ್ ರೂಂ ತೆರೆದು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಎರಡನೇ ಡೋಸ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ 9,100 ಡೋಸ್ ಲಸಿಕೆ ಲಭ್ಯವಿದೆ. ಎರಡನೇ ಡೋಸ್ ಲಸಿಕೆ ವಿತರಣೆಗೆ ಯಾವುದೇ ತೊಂದರೆ ಇಲ್ಲ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಮಾತನಾಡಿ, ಮಾಸ್ಕ್​​ಗೆ ಸಂಬಂಧಿಸಿದಂತೆ 38,200 ಪ್ರಕರಣಗಳಿಗೆ ದಂಡ ವಿಧಿಸಲಾಗಿದೆ. 846 ವಾಹನವನ್ನು ಜಪ್ತಿ ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.