ETV Bharat / state

ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನ.. ಮೂವರು ಖಾಕಿ ಬಲೆಗೆ

author img

By

Published : Jan 10, 2023, 12:18 PM IST

Updated : Jan 10, 2023, 12:54 PM IST

ಬಜರಂಗದಳ ಸಹ ಸಂಚಾಲಕ ಸುನೀಲ್​ ಮೇಲೆ ಹಲ್ಲೆಗೆ ಯತ್ನ ಪ್ರಕರಣ- ಮೂವರು ಆರೋಪಿಗಳು ವಶಕ್ಕೆ- ಇಂದು ಸಾಗರ ಪಟ್ಟಣ ಬಂದ್

shivamogga
ಎಸ್​ಪಿ ಮಿಥುನ್ ಕುಮಾರ್

ಎಸ್​ಪಿ ಮಿಥುನ್ ಕುಮಾರ್ ಮಾತನಾಡುತ್ತಿರುವುದು

ಶಿವಮೊಗ್ಗ: ಸಾಗರ ಪಟ್ಟಣದ ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ತಿಳಿಸಿದರು. ಈ ಕುರಿತು ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಅವರು, ಸಮೀರ್(ಎ1), ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಹಲ್ಲೆ ಪ್ರಕರಣದ ಎ1 ಆರೋಪಿ ಸಮೀರ್ ಎಂಬಾತನ ತಂಗಿಯನ್ನು ಸುನೀಲ್​ ನಾಲ್ಕೈದು ತಿಂಗಳಿನಿಂದ ಚುಡಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ತನಿಖೆ ವೇಳೆ ಸಮೀರ್​ ಬಾಯ್ಬಿಟ್ಟಿದ್ದಾನೆ ಎಂದು ತಿಳಿಸಿದರು.

ತಂಗಿಯನ್ನು ಚುಡಾಯಿಸುತ್ತಿರುವ ಬಗ್ಗೆ ಸುನೀಲ್​ಗೆ ಸಮೀರ್ ಎಚ್ಚರಿಕೆ ನೀಡಿದ್ದ. ಅಲ್ಲದೇ ತಂಗಿಯ ನಂಬರ್ ಕೊಡು ಅಂತ ಸಮೀರ್​ಗೆ ಸುನೀಲ್​ ಕೇಳಿದ್ದನಂತೆ. ಹಲವು ಬಾರಿ ಎಚ್ಚರಿಕೆ‌ ನೀಡಿದರೂ ಚುಡಾಯಿಸುವುದನ್ನು ನಿಲ್ಲಿಸಿರಲಿಲ್ಲ. ಅದರಂತೆಯೇ ಸೋಮವಾರ ಬೈಕ್​ನಲ್ಲಿ ಬರುತ್ತಿದ್ದ ಸಮೀರ್​ನನ್ನು ಸುನೀಲ್ ರೇಗಿಸಿದ್ದ. ಇದರಿಂದ ಕೋಪಗೊಂಡ ಸಮೀರ್ ತನ್ನ ಬೈಕಿನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತನಿಖೆ ವೇಳೆ ಹೇಳಿದ್ದಾನೆ. ಅಲ್ಲದೇ ಸಮೀರ್ ಒಬ್ಬ​ ಕುರಿಗಾಹಿ ಯುವಕನಾಗಿದ್ದು, ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಕತ್ತಿಯನ್ನು ಇಟ್ಟುಕೊಂಡಿದ್ದ. ಅದರಿಂದಲೇ ಹಲ್ಲೆಗೆ ಮುಂದಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್​ ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಸ್ನೇಹಿತರಾದ ಇಮಾಯಿನ್ ಮತ್ತು ಮನ್ಸೂರ್​ ಅನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದಲ್ಲಿ ಇವರ ಪಾತ್ರ ಏನೆಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿ ವಿಚಾರಣೆ ಬಳಿಕವಷ್ಟೇ ತಿಳಿಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸರ್ಕಾರಿ ಅಧಿಕಾರಿಯ ಶವ ಪತ್ತೆ!

ಇಂದು ಸಾಗರ ಬಂದ್: ಸುನೀಲ್ ಹಲ್ಲೆ ಯತ್ನ ಪ್ರಕರಣ ಖಂಡಿಸಿ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆ ಇಂದು ಸಾಗರ ಪಟ್ಟಣದಲ್ಲಿ ಬೆಳಗ್ಗೆಯಿಂದ ಸಂಜೆ ತನಕ ಬಂದ್​ ನಡೆಯಲಿದೆ. ಪಟ್ಟಣದ ಎಲ್ಲಾ ಅಂಗಡಿ-ಮುಂಗಟ್ಟುಗಳು ವ್ಯಾಪಾರ ಸ್ಥಗಿತಗೊಳಿಸಿವೆ. ಬಜರಂಗ ದಳ ಹಾಗೂ ಹಿಂದೂಪರ ಸಂಘಟನೆಗಳಿಂದ ಗಣಪತಿ ದೇವಾಲಯದಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯು ವಿವಿಧ ರಸ್ತೆಗಳಲ್ಲಿ ಸಾಗಲಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

Last Updated :Jan 10, 2023, 12:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.