ETV Bharat / state

ನರೇಗಾ ಹಣ ಬಿಡುಗಡೆಗೆ ಲಂಚ: ಎಸಿಬಿ ಬಲೆಗೆ ಬಿದ್ದ ಗ್ರಾಪಂ ಕಾರ್ಯದರ್ಶಿ

author img

By

Published : Sep 10, 2020, 5:07 PM IST

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಪ್ಪ ಎಂಬುವವರು ಲಂಚ ಪಡೆಯುವಾಗ ಎಸಿಬಿ ದಾಳಿ ನಡೆಸಿದೆ. ಗುತ್ತಿಗೆದಾರ ಮಂಜುನಾಥ ಎಂಬುವವರಿಂದ ಮನರೇಗಾ ಹಣ ಬಿಡುಗಡೆಗೆ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ACB attack in shivamogg
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಪ್ಪ

ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹಣ ಬಿಡುಗಡೆ ಮಾಡಲು ಲಂಚ ಪಡೆಯುವಾಗ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಸಿಎಂ ತವರು ಕ್ಷೇತ್ರದಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತಿಯ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು. ಇಂದು ಹಣ ಪಡೆಯುವಾಗ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ದಾಳಿ ನಡೆಸಲಾಗಿದೆ.

ಡಿವೈಎಸ್ಪಿ ಲೋಕೇಶ್​ ನೇತೃತ್ಚದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ಇನ್​ಸ್ಪೆಕ್ಟರ್ ತಿಪ್ಪೇಸ್ವಾಮಿ, ವಿರೇಂದ್ರ ಹಾಗೂ ಸಿಬ್ಬಂದಿ ಯೋಗೀಶ್ ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.