ETV Bharat / state

ರಾಜ್ಯದಲ್ಲಿ ಬಿಜೆಪಿ 130 ರಿಂದ 135 ಸ್ಥಾನ ಗೆಲ್ಲಲಿದೆ: ಬಿ.ಎಸ್.ಯಡಿಯೂರಪ್ಪ

author img

By

Published : May 8, 2023, 12:34 PM IST

ಪ್ರಮುಖ ವಿಷಯದ ಕುರಿತು ಸುದ್ದಿಗೋಷ್ಠಿ ನಡೆಸುವಂತೆ ಕೇಂದ್ರದಿಂದ ಸೂಚನೆ ಬಂದ ಕಾರಣ ನಾನು ಬೆಂಗಳೂರಿಗೆ ತೆರಳುತ್ತಿದ್ದೇನೆ. ಈ ಬಾರಿ ಬಿಜೆಪಿ ಪಕ್ಷವು 130 ರಿಂದ 135 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

yediyurappa
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದಲ್ಲಿ ಮಾತನಾಡದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ : ರಾಜ್ಯದಲ್ಲಿ ಚುನಾವಣಾ ವಾತಾವರಣ ನಮ್ಮ ನಿರೀಕ್ಷೆಗೂ ಮೀರಿ ಚೆನ್ನಾಗಿದೆ. ಈ ಬಾರಿ ಬಿಜೆಪಿ ಕನಿಷ್ಠ 130 ರಿಂದ 135 ಸ್ಥಾನ ಗೆಲ್ಲಲಿದೆ. ಶಿಕಾರಿಪುರದಲ್ಲಿ ವಿಜಯೇಂದ್ರ ಕನಿಷ್ಠ 40-45 ಸಾವಿರ ಅಂತರದಲ್ಲಿ ಗೆಲ್ಲುತ್ತಾನೆ ಎಂಬ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದರು.

ಶಿಕಾರಿಪುರದಲ್ಲಿಂದು ನಟ ಸುದೀಪ್ ಅವರ ರೋಡ್ ಶೋದಲ್ಲಿ ಭಾಗಿಯಾಗುವ ಮುನ್ನ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ನಂತರ ವಾತಾವರಣ ಬದಲಾಗಿದೆ. ನಿರೀಕ್ಷೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ನಾನು ಈಗ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಲು ತೆರಳುತ್ತಿದ್ದೇನೆ. ಬೆಂಗಳೂರಿನಲ್ಲಿ ಪ್ರಮುಖ ವಿಷಯದ ಕುರಿತು ಸುದ್ದಿಗೋಷ್ಠಿ ನಡೆಸುವಂತೆ ಕೇಂದ್ರದಿಂದ ಸೂಚನೆ ಬಂದ ಕಾರಣ ಬೆಂಗಳೂರಿಗೆ ತೆರಳುತ್ತಿರುವೆ. ಅದನ್ನು ಮುಗಿಸಿಕೊಂಡು ವಾಪಸ್ ಶಿಕಾರಿಪುರಕ್ಕೆ ಆಗಮಿಸುವೆ ಎಂದರು.

ಇದನ್ನೂ ಓದಿ : 'ಬಿ.ಸಿ.ಪಾಟೀಲ್ ‌25 ರಿಂದ 30 ಸಾವಿರ ಮತಗಳಿಂದ ಜಯ ಸಾಧಿಸುತ್ತಾರೆ': ಬಿಎಸ್​ವೈ

ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, "ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಇದು ರಾಜ್ಯದ ಭವಿಷ್ಯ ರೂಪಿಸುವ ಚುನಾವಣೆಯಾಗಲಿದೆ. ಅಭಿವೃದ್ಧಿ ರಥ ತೆಗೆದುಕೊಂಡು ಹೋಗುವ ಮಹಾ ಚುನಾವಣೆಯಾಗಿದೆ. ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕದ ಪಾತ್ರ ಮಹತ್ವದ್ದಾಗಿದೆ. ಕಾಂಗ್ರೆಸ್ 50-60 ವರ್ಷಗಳ ಕಾಲ ದೇಶವನ್ನು, ರಾಜ್ಯವನ್ನು ಆಳಿದೆ. ಆದರೆ, ಮೋದಿ‌ಯವರು ಪ್ರಧಾನಿಯಾದ ಬಳಿಕ ದೇಶದ ದಿಕ್ಕನ್ನು ಬದಲಾಯಿಸಿದ್ದಾರೆ. ಈ ಬಾರಿ ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ : ಯಾರ ಹಂಗಿಲ್ಲದೇ ಸ್ವತಂತ್ರವಾಗಿ ಬಿಜೆಪಿ ಸರ್ಕಾರ ಬರೋದು ನಿಶ್ಚಿತ: ಯಡಿಯೂರಪ್ಪ

ಕೋವಿಡ್ ಸಮಯದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಿದ್ದರೆ ಪಾಕಿಸ್ತಾನ, ಶ್ರೀಲಂಕಾಕ್ಕಿಂತ ನಮ್ಮ ದೇಶ ಮೊದಲು ದಿವಾಳಿ ಆಗುತಿತ್ತು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಸುದೀಪ್ ಇಂದು ಶಿಕಾರಿಪುರದಲ್ಲಿ ಪ್ರಚಾರ ನಡೆಸುತ್ತಾರೆ. ಅವರ ಪ್ರಚಾರ ನಮಗೆ ಹೆಚ್ಚು ಬಲ ಕೊಡಲಿದೆ. ಯುವಕರು ಈ ರೀತಿ ಉತ್ಸಾಹದಿಂದ ಇರುತ್ತಾರೆ ಅಂತಾ ನಾನು ನಿರೀಕ್ಷೆ ಮಾಡಿರಲಿಲ್ಲ. ಶಿಕಾರಿಪುರದ ಜನರ ಸೇವೆ ಮಾಡಲು ನಾನು ಉತ್ಸುಕನಾಗಿದ್ದೇನೆ, 50-60 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : ಯಾರ ಜೊತೆಗೂ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ, ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ: ಬಿಎಸ್​ವೈ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ಎರಡೇ ದಿನ ಬಾಕಿ ಇದೆ. ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮಂಗಳವಾರ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಹಾಗೆಯೇ, ಮತದಾನ ನಡೆಯುವ 48 ಗಂಟೆ ಮುಂಚೆ ಯಾವುದೇ ರೋಡ್ ಶೋ, ತೆರೆದ ವಾಹನದಲ್ಲಿ ಪ್ರಚಾರ ಮಾಡುವಂತಿಲ್ಲ. ಒಂದು ವೇಳೆ ನೀತಿ ಸಂಹಿತೆ ಉಲ್ಲಂಘಿಸಿದರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.