ETV Bharat / state

ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ: ಸಿಎಂ ವಿಶ್ವಾಸ

author img

By

Published : Nov 8, 2020, 10:00 AM IST

Updated : Nov 8, 2020, 12:01 PM IST

ಕಾಂಗ್ರೆಸ್ ಹಾಗು ಇತರೆ ಪಕ್ಷದವರು ಯಾವುದೇ ರೀತಿಯ ಟೀಕೆ-ಟಿಪ್ಪಣಿ ಮಾಡಿದರೂ‌ ಕೂಡ ಜನ ನಮ್ಮ ಪರವಾಗಿ ಇದ್ದಾರೆ. ಈ ಮೊದಲು ತಿಳಿಸಿದಂತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BS Yadiyurappa
ಸಿಎಂ ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ಶಿರಾ ಹಾಗೂ ಆರ್​ಆರ್ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಯಂತೆ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ತಮ್ಮ ಪುತ್ರ ವಿಜಯೇಂದ್ರ ಅವರ ಕಿಯಾ ಕಾರು ಶೋ ರೂಂ ಉದ್ಘಾಟನೆಗೆ ಆಗಮಿಸಿದ ವೇಳೆ ಮಾತನಾಡಿದ ಸಿಎಂ, ಈ ಮೊದಲು ಹೇಳಿದಂತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಹಾಗು ಇತರೆ ಪಕ್ಷದವರು ಏನೇ ಟೀಕೆ-ಟಿಪ್ಪಣಿ ಮಾಡಿದರೂ‌ ಕೂಡ ಜನ ನಮ್ಮ ಪರವಾಗಿ ಇದ್ದಾರೆ ಎಂದು ಅಭಿಪ್ರಾಯಪಟ್ಟರು.‌‌

ಸಿಎಂ ಬಿಎಸ್​​ವೈ ಶಿವಮೊಗ್ಗಕ್ಕೆ ಭೇಟಿ

ಶಿರಾದಲ್ಲಿ ನಮ್ಮ ಪಕ್ಷ 25 ಸಾವಿರ ಮತಗಳ ಅಂತರದಿಂದ ಗೆಲುವು‌ ಸಾಧಿಸಲಿದೆ. ಅದೇ ರೀತಿ ಆರ್​ಆರ್ ನಗರದಲ್ಲಿಯೂ ಸಹ 40 ಸಾವಿರ ಮತಗಳ ಅಂತರದಿಂದ ಗೆಲುತ್ತೇವೆ ಎಂದರು. ಬಿಹಾರದಲ್ಲೂ ಕೂಡ ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಬಿಎಸ್​ವೈ ಭವಿಷ್ಯ ನುಡಿದರು.

ಶರಾವತಿ ಸಂತ್ರಸ್ತರ ಸಮಸ್ಯೆ ಹಲವು ವರ್ಷಗಳಿಂದ ಇದ್ದು, ಈ ಸಮಸ್ಯೆಗೆ ನ್ಯಾಯಯುತ ಪರಿಹಾರ ಕೊಡಲು ಸೂಚಿಸಿದ್ದೇನೆ. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಂಸದರು, ಶಾಸಕರು ಭಾಗಿಯಾಗಿದ್ದು, ಕಾಲಮಿತಿಯೊಳಗೆ ಸಮಸ್ಯೆಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಷ್ಟೇ ಅಲ್ಲದೆ, ಜಿಲ್ಲೆಯ ಅಭಿವೃದ್ಧಿ ಕುರಿತು ಡಿಸಿ ಸೇರಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದೇನೆ, ಅಭಿವೃದ್ಧಿಗೆ ಬೇಕಾದ ಎಲ್ಲಾ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕಿಯಾ ಕಾರು ಷೋ ರೂಂ ಉದ್ಘಾಟಿಸಿದ ಸಿಎಂ ಬಿಎಸ್​ವೈ:

ನಗರದ ಬೈಪಾಸ್ ರಸ್ತೆಯಲ್ಲಿ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರ ಒಡೆತನದ ಕಿಯಾ ಕಾರು ಶೋ ರೂಂ ಅನ್ನು ಸಿಎಂ ಬಿ.ಎಸ್ ಯಡಿಯೂರಪ್ಪ, ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಿದರು.

ಕಿಯಾ ಕಾರು ಶೋ ರೂಂ ಉದ್ಘಾಟನೆ

ಈ ಸಂದರ್ಭದಲ್ಲಿ ಸಿಎಂ ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರ, ಸೇರಿದಂತೆ ಹಲವು ಮುಖಂಡರು ಮತ್ತು ಬಿಎಸ್​​ವೈ ಕುಟುಂಬಸ್ಥರು ಉಪಸ್ಥಿತರಿದ್ದರು.

ಸಿಎಂ ಶಿವಮೊಗ್ಗದಲ್ಲಿಂದು ವಾಸ್ತವ್ಯ ಹೂಡಿ ನಾಳೆ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.

Last Updated : Nov 8, 2020, 12:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.