ETV Bharat / state

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ದುರಸ್ತಿ: ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ

author img

By

Published : Apr 1, 2023, 8:55 PM IST

Continuation of State Highway 52 Alternate Route Notification
ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಪರ್ಯಾಯ ಮಾರ್ಗ ಅಧಿಸೂಚನೆ ಮುಂದುವರಿಕೆ

ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್​ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಕಾಮಗಾರಿ ನಡೆಯುವಾಗ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ಮಾರ್ಗ ಬದಲಿಸಲಾಗಿದೆ.

ಶಿವಮೊಗ್ಗ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್​ನ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್​ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಏ.15 ರವರೆಗೆ ಅಂದರೆ ಹೆಚ್ಚುವರಿ 10 ದಿನಗಳ ಕಾಲ ವಿಸ್ತರಿಸಲಾಗಿದೆ.

ಸದ್ಯ ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕಾಗಿದೆ. ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ರಸ್ತೆ ಮೂಲಕ ಸಂಚರಿಸಬೇಕಾಗಿದೆ. ಹಾಗೂ ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.

ಇದನ್ನೂ ಓದಿ: ವೀಕೆಂಡ್ ಹಿನ್ನೆಲೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ‌ ಮುಳುಗಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.