ETV Bharat / state

ತೀರ್ಥಹಳ್ಳಿ ತಾಲೂಕಿನಲ್ಲಿ ಮೊದಲ ಮಂಗನ ಕಾಯಿಲೆ ಕೇಸ್​ ಪತ್ತೆ

author img

By

Published : Jan 21, 2022, 6:00 PM IST

Updated : Jan 21, 2022, 7:23 PM IST

First KFD virus found in Shimoga district thirthahalli
ತೀರ್ಥಹಳ್ಳಿ ತಾಲೂಕಿನನಲ್ಲಿ ಮೊದಲ ಮಂಗನ ಕಾಯಿಲೆ ಕೇಸ್​ ಪತ್ತೆ

ಸಾಗರ ತಾಲೂಕಿನ ಅರಳಗೋಡು ಗ್ರಾಮದಲ್ಲಿ ಮಂಗನಕಾಯಿಲೆಗೆ ಕಳೆದ ಎರಡು ವರ್ಷಗಳ ಹಿಂದೆ 26 ಮಂದಿ ಸಾವನ್ನಪ್ಪಿದ್ದರು. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ನಿರಂತರವಾಗಿ ಕೆಎಫ್​​​ಡಿ ವ್ಯಾಕ್ಸಿನ್ ನೀಡಲು ಆರಂಭಿಸಿತ್ತು. ಜೊತೆಗೆ ಪ್ರತಿ ಆರು ತಿಂಗಳಿಗೊಮ್ಮೆ ಮಂಗನಕಾಯಿಲೆ ಕಾಣಿಸಿಕೊಳ್ಳುವ ಪ್ರದೇಶಗಳ ಕಾಡಿನಲ್ಲಿ ಉಣುಗುಗಳ ಪರೀಕ್ಷೆ ನಡೆಸಲಾಗಿತ್ತು. ಹೀಗಾಗಿ, ಕಳೆದ ಎರಡು ವರ್ಷಗಳಿಂದ ಕೆಎಫ್​​​ಡಿ ಪತ್ತೆಯಾಗಿರಲಿಲ್ಲ..

ಶಿವಮೊಗ್ಗ: ಕೊರೊನಾ ಜೊತೆ ಜೊತೆಗೆ ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ (ಕೆಎಫ್​​ಡಿ) ಕಾಣಿಸಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಮೊದಲ ಮಂಗನಕಾಯಿಲೆ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೂಡಿಗೆ ಗ್ರಾಮದ 57 ವರ್ಷದ ಮಹಿಳೆಯೊಬ್ಬರಲ್ಲಿ ಮಂಗನಕಾಯಿಲೆ ಪತ್ತೆಯಾಗಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಮೊದಲ ಮಂಗನ ಕಾಯಿಲೆ ಕೇಸ್​ ಪತ್ತೆ

ಜ್ವರದಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋದಾಗ ಆಕೆಗೆ ಮಂಗನಕಾಯಿಲೆ ಲಕ್ಷಣಗಳು ಇದ್ದಿದ್ದರಿಂದ ಪರೀಕ್ಷೆಗೊಳಪಡಿಸಲಾಗಿತ್ತು. ಆಗ ಮಹಿಳೆಗೆ ಕಾಯಿಲೆ ತಗುಲಿರುವುದು ದೃಢಪಟ್ಟಿದೆ. ಸದ್ಯ ಮಂಗನಕಾಯಿಲೆಗೆ ತುತ್ತಾಗಿರುವ ಮಹಿಳೆಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ರದ್ದು: ನಿರ್ಣಯ ಸ್ವಾಗತಿಸಿದ ವ್ಯಾಪಾರಿಗಳ ಸಂಘಟನೆಗಳು

ಸಾಗರ ತಾಲೂಕಿನ ಅರಳಗೋಡು ಗ್ರಾಮದಲ್ಲಿ ಮಂಗನಕಾಯಿಲೆಗೆ ಕಳೆದ ಎರಡು ವರ್ಷಗಳ ಹಿಂದೆ 26 ಮಂದಿ ಸಾವನ್ನಪ್ಪಿದ್ದರು. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ನಿರಂತರವಾಗಿ ಕೆಎಫ್​​​ಡಿ ವ್ಯಾಕ್ಸಿನ್ ನೀಡಲು ಆರಂಭಿಸಿತ್ತು. ಜೊತೆಗೆ ಪ್ರತಿ ಆರು ತಿಂಗಳಿಗೊಮ್ಮೆ ಮಂಗನಕಾಯಿಲೆ ಕಾಣಿಸಿಕೊಳ್ಳುವ ಪ್ರದೇಶಗಳ ಕಾಡಿನಲ್ಲಿ ಉಣುಗುಗಳ ಪರೀಕ್ಷೆ ನಡೆಸಲಾಗಿತ್ತು. ಹೀಗಾಗಿ, ಕಳೆದ ಎರಡು ವರ್ಷಗಳಿಂದ ಕೆಎಫ್​​​ಡಿ ಪತ್ತೆಯಾಗಿರಲಿಲ್ಲ.

ಆದರೆ, ಡಿಸೆಂಬರ್ ತಿಂಗಳಿನಲ್ಲಿ ಅರಳಗೋಡು ಭಾಗದಲ್ಲಿ ಉಣುಗುಗಳ ಪರೀಕ್ಷೆ ನಡೆಸಿದಾಗ ಆ ಉಣುಗುಗಳಲ್ಲಿ ಕೆಎಫ್​​ಡಿ ವೈರಸ್ ಇರುವುದು ಪತ್ತೆಯಾಗಿತ್ತು. ಇದರಿಂದಾಗಿ ಅರಳಗೋಡು ಭಾಗದ ಜನರಲ್ಲಿ ಮಂಗನಕಾಯಿಲೆ ಆತಂಕ ಎದುರಾಗಿತ್ತು. ಈ ನಡುವೆ ಇದೀಗ ತೀರ್ಥಹಳ್ಳಿ ತಾಲೂಕಿನಲ್ಲಿ ಮೊದಲ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated :Jan 21, 2022, 7:23 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.