ETV Bharat / state

ಶಿವಮೊಗ್ಗ ಜಿ.ಪಂ ಮಾಜಿ ಅಧ್ಯಕ್ಷ ಈಸೂರು ಬಸವರಾಜ್ ನಿಧನ: ಸಿಎಂ ಸಂತಾಪ

author img

By

Published : Jul 2, 2021, 6:20 PM IST

ಮಾಜಿ ಸಿಎಂ ಬಂಗಾರಪ್ಪನವರ ಅನುಯಾಯಿಯಾಗಿ ರಾಜಕೀಯ ಪ್ರವೇಶ ಮಾಡಿದ್ದ ಇವರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

former-member-of-the-zp-issuru-basavaraj-passed-away
ಈಸೂರು ಕ್ಷೇತ್ರದ ಜಿಪಂ ಮಾಜಿ ಸದಸ್ಯ ಈಸೂರು ಬಸವರಾಜ್ ನಿಧನ

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಈಸೂರು ಕ್ಷೇತ್ರದ ಮಾಜಿ ಸದಸ್ಯ ಈಸೂರು ಬಸವರಾಜ್ ಅನಾರೋಗ್ಯದಿಂದ‌ ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಾಜಿ ಸಿಎಂ ಬಂಗಾರಪ್ಪನವರ ಅನುಯಾಯಿಗಳಾಗಿ ರಾಜಕೀಯ ಪ್ರವೇಶ ಮಾಡಿದ್ದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಹೋರಾಟದ ಹಾದಿಯಿಂದಲೇ ಸ್ಥಳೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಆವರ ಅಗಲಿಕೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರ ಸಂತಾಪ ಸೂಚಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಈಸೂರು ಬಸವರಾಜ್ ಅವರು ಪತ್ನಿ, ಮೂರು ಹೆಣ್ಣು ಮಕ್ಕಳನ್ನು ಹಾಗೂ ಮಗನನ್ನು ಅಗಲಿದ್ದಾರೆ.

ಇದನ್ನೂ ಓದಿ: ಒಡಿಶಾದ ಖ್ಯಾತ ಕವಿಗೆ ಒಲಿದ ಕುವೆಂಪು ರಾಷ್ಟ್ರೀಯ ಪುರಸ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.