ETV Bharat / state

ಪಿಎಸ್ಐ ಪರೀಕ್ಷಾ ಹಗರಣದ ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ

author img

By

Published : May 2, 2022, 4:41 PM IST

Updated : May 2, 2022, 5:37 PM IST

ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ತನಿಖೆಯ ಬಗ್ಗೆ ನಾನು ಮುಂದೆ ತಿಳಿಸುತ್ತೇನೆ. ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​ ಖರ್ಗೆ ಅವರು ತಮಗೆ ಗೊತ್ತಿಲ್ಲದ ವಿಷಯಗಳನ್ನೆಲ್ಲಾ ಮಾತನಾಡುತ್ತಿದ್ದಾರೆ. ಅವರಿಗೆ ಏನೂ ಗೊತ್ತಿಲ್ಲ. ಅವರು ಸುಮ್ಮನೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು..

ಶಿವಮೊಗ್ಗ : ಪಿಎಸ್ಐ ಪರೀಕ್ಷಾ ಹಗರಣದಲ್ಲಿ ರಾಜ್ಯದ ಪ್ರಭಾವಿ ಸಚಿವರೊಬ್ಬರ ಸಂಬಂಧಿ ಭಾಗಿಯಾಗಿರುವ ಆರೋಪದ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಪಿಎಸ್ಐ ಪರೀಕ್ಷೆಯ ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿದರು

ಪಿಎಸ್​ಐ ಪರೀಕ್ಷಾ ಹಗರಣದಲ್ಲಿ ಈಗಾಗಲೇ ಸಾಕಷ್ಟು ಜನ ಅರೆಸ್ಟ್ ಆಗಿದ್ದಾರೆ. ಇನ್ನು ಮುಂದೆಯೂ ಸಹ ಅರೆಸ್ಟ್ ಆಗುತ್ತಾರೆ. ತನಿಖೆಯ ಬಗ್ಗೆ ನಾನು ಮುಂದೆ ತಿಳಿಸುತ್ತೇನೆ. ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​ ಖರ್ಗೆ ಅವರು ತಮಗೆ ಗೊತ್ತಿಲ್ಲದ ವಿಷಯಗಳನ್ನೆಲ್ಲಾ ಮಾತನಾಡುತ್ತಿದ್ದಾರೆ. ಅವರಿಗೆ ಏನೂ ಗೊತ್ತಿಲ್ಲ. ಅವರು ಸುಮ್ಮನೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಎಂಇಎಸ್ ಕುರಿತು ತಲೆ ಕೆಡಿಸಿಕೊಳ್ಳುವಂತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ ಎಂದರು.

ಓದಿ: ನಾವು ಗಂಡಸರಲ್ಲ, ಅವರೋಬ್ಬರೇ ಗಂಡಸರು. ಹೀಗಾಗಿ ನಮಗೆ ಭಯ ಆಗುತ್ತಿದೆ: ಡಿಕೆಶಿ

Last Updated :May 2, 2022, 5:37 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.