ETV Bharat / state

ಯಡಿಯೂರಪ್ಪ ಅವರ ಆಸೆ ಈಡೇರುತ್ತೆ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

author img

By

Published : Aug 28, 2022, 7:56 PM IST

ರಾಜ್ಯದ ನಾಯಕರು ಯಾರಿರಬೇಕು, ಯಾರು ಬೇಡ ಎನ್ನುವುದು ರಾಷ್ಟ್ರದ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆಸೆಯಂತೆ ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಯಡಿಯೂರಪ್ಪ ಅವರ ಆಸೆ ಈಡೇರುತ್ತೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ನಾಯಕರು ವಿಶೇಷ ಸ್ಥಾನಮಾನ ಕೊಟ್ಟಿದ್ದಾರೆ. ಕರ್ನಾಟಕದ ಎಲ್ಲಾ ಕಾರ್ಯಕರ್ತರಿಗೂ ಸಂತೋಷವಾಗಿದೆ. ಚುನಾವಣೆ ಬಂದ ಸಂದರ್ಭದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಪ್ರವಾಸ ಮಾಡಿ 150ಕ್ಕೂ ಹೆಚ್ಚು ಸೀಟ್​ಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅವರ ಆಸೆ ಈಡೇರುತ್ತೆ ಎನ್ನುವ ವಿಶ್ವಾಸ ನನಗೂ ಇದೆ ಎಂದರು.

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಮಾತನಾಡಿದರು

ಇನ್ನು, ಪಕ್ಷದ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡಿದ ಈಶ್ವರಪ್ಪ, ರಾಜ್ಯದ ನಾಯಕರು ಯಾರಿರಬೇಕು, ಯಾರು ಬೇಡ ಎನ್ನುವುದನ್ನು ಪಕ್ಷದ ಹೈಕಮಾಂಡ್​ ನಾಯಕರು ತೀರ್ಮಾನ ಮಾಡುತ್ತಾರೆ. ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ ಅದಕ್ಕೆ ನಾವು ಬದ್ಧ ಎಂದು ಸ್ಪಷ್ಟಪಡಿಸಿದರು.

ಓದಿ: ಮೈ ಶುಗರ್ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಕ್ರಮ : ಶಂಕರ್ ಬಿ ಪಾಟೀಲ್ ಮುನೇನಕೊಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.