ETV Bharat / state

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಜಾನ್ ಕೂಗಿದ್ದು ಸಂವಿಧಾನ ವಿರೋಧಿ ನಡೆ: ಕೆ ಎಸ್ ಈಶ್ವರಪ್ಪ

author img

By

Published : Mar 20, 2023, 4:11 PM IST

Updated : Mar 20, 2023, 4:25 PM IST

ಶಿವಮೊಗ್ಗದ ಡಿಸಿ ಕಚೇರಿ ಆವರಣದಲ್ಲಿ ಆಜಾನ್ ಕೂಗುವ ಮೂಲಕ ಎಸ್​ಡಿಪಿಐ ಕೋಮುಸೌಹಾರ್ದವನ್ನು ಹಾಳು ಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ
ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ

ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ

ಶಿವಮೊಗ್ಗ: ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಜಾನ್ ಕೂಗಿದ್ದು, ಸಂವಿಧಾನ ವಿರೋಧಿ ನೀತಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ. ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಜಾನ್ ಕೂಗುವ ಮೂಲಕ ಎಸ್​​ಡಿಪಿಐ ಕೋಮುಸೌಹಾರ್ದವನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

ವಿಧಾನಸೌಧದಲ್ಲೂ ನಾವು ಆಜಾನ್​ ಕೂಗುತ್ತೇವೆ ಎಂದಿದ್ದಾರೆ: ಇಂಥವರ ವಿರುದ್ಧ ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ಆಜಾನ್ ಕೂಗಿದ ಯುವಕನ ವಿರುದ್ಧ ಸರಿಯಾದ ಕ್ರಮ ತೆಗೆದುಕೊಳ್ಳಬೇಕೆಂದು ನಾನು ಸಿಎಂಗೆ ಮನವಿ ಮಾಡುತ್ತೇನೆ. ಈತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಆಜಾನ್​ ಕೂಗುವ ನೆಪದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರೇ ಈ ಕೃತ್ಯ ಎಸಗಿದ್ದಾರೆ. ಅಷ್ಟೇ ಅಲ್ಲದೇ ವಿಧಾನಸೌಧದಲ್ಲೂ ನಾವು ಆಜಾನ್​ ಕೂಗುತ್ತೇವೆ ಎಂದಿದ್ದಾರೆ. ಇದು ಸಂವಿಧಾನ ವಿರೋಧಿ ನಡೆ. ಯಾರು ಸಂವಿಧಾನದ ವಿರುದ್ಧ ನಡೆದುಕೊಳ್ಳುತ್ತಾರೋ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದರು. ಇಲ್ಲವೆಂದ್ರೆ ಈ ಕೋಮುಸೌಹಾರ್ದತೆಗೆ ಧಕ್ಕೆ ಉಂಟಾಗಿ ಜನ ಸಮಸ್ಯೆ ಅನುಭವಿಸಬೇಕಾಗುತ್ತದೆ ಎಂದು ಈಶ್ವರಪ್ಪ ಹೇಳಿದರು.

ಆಜಾನ್ ಕೂಗುವ ಕುರಿತು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಯಾವವ ಸಂದರ್ಭದಲ್ಲಿ ಆಜಾನ್ ಕೂಗಬೇಕು, ಆಜಾನ್ ಕೂಗುವಾಗ ಎಷ್ಟು ಸೌಂಡ್​ ಇಟ್ಟುಕೊಳ್ಳಬೇಕು ಎಂಬುದನ್ನು ಈಗಾಗಲೇ ಹೇಳಿದೆ. ಇದೆಲ್ಲವನ್ನು ಮೀರಿ ಆಜಾನ್ ಕೂಗುವಂತಹ ಪ್ರಯತ್ನವನ್ನು ಕೆಲವರು ನಡೆಸುತ್ತಿದ್ದಾರೆ. ನಾನು ನಮ್ಮ ವಿಜಯಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಕೊಡಗು ಪೇಟೆಯ ವಿರಾಜಪೇಟೆ ತಾಲೂಕಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ಆಜಾನ್ ಕೂಗಿದ್ರು ಎಂದರು.

ಅದೇ ರೀತಿ ಮಂಗಳೂರಿನಲ್ಲಿ ನಮ್ಮ ಭರತ್ ಶೆಟ್ಟಿ ಕ್ಷೇತ್ರದಲ್ಲಿ ಆಜಾನ್ ಕೂಗಿದ್ರು. ನಾನು ಅವರಿಗೆ ಅಲ್ಲೆಯೇ ಸ್ಪಷ್ಟವಾಗಿ ಹೇಳಿದ್ದೇನೆ. ಈ ರೀತಿ ಸುಪ್ರೀಂಕೋರ್ಟ್​ನ ತೀರ್ಪಿನ ವಿರುದ್ಧ ಆಜಾನ್ ಕೂಗುವುದು ಸರಿಯಲ್ಲ, ಇವತ್ತಲ್ಲಾ ನಾಳೆ ಇಂತಹದ್ದನ್ನು ನಿಲ್ಲಿಸುವಂತಹ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನಾವು ಕೊಟ್ಟಿದ್ದೇವೆ ಎಂದು ಮಾಜಿ ಸಚಿವ ಈಶ್ವರಪ್ಪ ತಿಳಿಸಿದರು.

ಆಜಾನ್ ಕೂಗಿದವರ ವಿರುದ್ಧ ಸೂಕ್ತ ಕ್ರಮ: ಪರೀಕ್ಷೆಯ ಸಂದರ್ಭ ಆಜಾನ್ ಕೂಗುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ರೋಗಿಗಳಿಗೂ ತೊಂದರೆಯಾಗುತ್ತಿದೆ. ಇಂತಹ ಸಂವಿಧಾನ ವಿರೋಧಿ ಚಟುವಟಿಕೆ ಮಾಡಿರುವ ಹಾಗೂ ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆ ಮಾಡಿರುವ ಸಂಘಟನೆಯವರನ್ನು ತಕ್ಷಣ ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಅವರ ಮೇಲೆ ಕಲಂ 107 ಹಾಕಿ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಅರ್ಥವೇ ಇಲ್ಲ. ಈ ರೀತಿ ಜಿಲ್ಲಾಧಿಕಾರಿ ಕಚೇರಿ ಎದುರೇ ಆಜಾನ್ ಕೂಗುವುದು ನೇರವಾಗಿ ರಾಷ್ಟ್ರದ್ರೋಹ. ಹೀಗಾಗಿ ಈ ರೀತಿ ಆಜಾನ್ ಕೂಗಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಎಂ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಕೆ ಎಸ್​ ಈಶ್ವರಪ್ಪ ಹೇಳಿದರು.

ಆಜಾನ್ ಕೂಗಿದವರ ವಿರುದ್ಧ ಪ್ರತಿಭಟನೆ: ಇಂದು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಜಾನ್ ಕೂಗಿದವರ ವಿರುದ್ಧವಾಗಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ : ಮಹಿಳಾ ಪೀಡಕರ ಕೂಟಕ್ಕೆ ಮಹಿಳಾ ರಕ್ಷಕರೇ ಅಪರಾಧಿಗಳಾಗಿ ಕಾಣುತ್ತಾರೆ: ಸಿದ್ದರಾಮಯ್ಯ

Last Updated : Mar 20, 2023, 4:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.