ETV Bharat / state

ಅಸಮಾಧಾನಿತ 30ಕ್ಕೂ ಹೆಚ್ಚು ಶಾಸಕರಿಂದ ಸಿಎಂಗೆ ಪತ್ರ, ನಕಲಿ ಆಗಿರಲು ಸಾಧ್ಯವೇ ಇಲ್ಲ: ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ

author img

By

Published : Jul 26, 2023, 11:02 PM IST

Updated : Jul 26, 2023, 11:08 PM IST

ಇನ್ನು ಸಿಂಗಾಪುರದಲ್ಲಿ ಸರ್ಕಾರದ ಪತನಕ್ಕೆ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರೇ ಸ್ಪಷ್ಟನೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.

KS Eshwarappa spoke at the press conference.
ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಎರಡು ತಿಂಗಳಾಗಿಲ್ಲ. ಪಕ್ಷದೊಳಗಿನ ಬೇಗುದಿಗಳು ಆರಂಭವಾಗಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿದರು. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದೊಳಗೆ ಸುಮಾರು 30ಕ್ಕೂ ಹೆಚ್ಚು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿ ಗಳಿಗೆ ಬಹಿರಂಗ ಪತ್ರ ಬರೆದಿದ್ದು. ಇದೀಗ ಆ ಪತ್ರ ವೈರಲ್​ ಆಗಿದೆ. ಪತ್ರ ನಕಲಿ ಆಗಿರಲು ಸಾಧ್ಯವೇ ಇಲ್ಲ. ನಕಲಿ ಆಗಿದ್ದರೆ ತನಿಖೆಯಾಗಲಿ, ಇಂಥ ಕೆಲಸಗಳನ್ನು ಕಾಂಗ್ರೆಸ್​ನವರು ಮಾಡುತ್ತಿದ್ದಾರೋ ಅಥವಾ ಬೇರೆಯವರು ಮಾಡುತ್ತಿದ್ದಾರೆ ಎನ್ನುವುದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.

ಇನ್ನು ಸಿಂಗಾಪುರದಲ್ಲಿ ಸರ್ಕಾರದ ಪತನಕ್ಕೆ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರೇ ಸ್ಪಷ್ಟನೆ ನೀಡಬೇಕು. ಇದರ ಜೊತೆಗೆ ಬಿಕೆ ಹರಿಪ್ರಸಾದ್ ಕೂಡ ನಮಗೆ ಸಿಎಂ ಮಾಡುವುದು ಗೊತ್ತು ಇಳಿಸುವುದು ಗೊತ್ತು ಎಂದು ಹೇಳಿದ್ದಾರೆ ಅವರ ಹೇಳಿಕೆಯನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಅವರು ಸಾಮಾನ್ಯ ಕಾರ್ಯಕರ್ತರಲ್ಲ ಅವರೊಬ್ಬರು ರಾಷ್ಟ್ರೀಯ ನಾಯಕರು ಎಂದು ಹೇಳಿದರು.


ಕೆಂಪಣ್ಣ ಕಾಂಗ್ರೆಸ್ ಏಜೆಂಟ್​: ಇನ್ನು ಗುತ್ತಿಗೆದಾರ ಕಾಮಗಾರಿಯ ಬಿಲ್ ಸುಮಾರು 28,000 ಕೋಟಿ ಇದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಹಿಂದಿನ ಸರ್ಕಾರದ ಸಂದರ್ಭದಲ್ಲಿ ಹೋರಾಟ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಏಜೆಂಟರಾಗಿರುವ ಅವರು ಈಗ ಅವರದೇ ಸರ್ಕಾರ ಬಂದಿದೆ. ಆ ಹಣವನ್ನು ಯಾಕೆ ಬಿಡುಗಡೆ ಮಾಡಿಸಿಲ್ಲ ಎಂದು ಲೇವಡಿ ಮಾಡಿದರು. ಹಿಂದಿನ ನಮ್ಮ ಸರ್ಕಾರ ಆಡಳಿತದಲ್ಲಿದ್ದಾಗ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಕಲ್ಯಾಣ ಇಲಾಖೆ ,ನೀರಾವರಿ ಇಲಾಖೆಯ ಅನೇಕ ಕಾಮಗಾರಿಗಳು ಆಗಿದ್ದು ಕೆಲವು ಅರ್ಧಕ್ಕೆ ನಿಂತು ಹಾಳಾಗುತ್ತಿವೆ. ಇನ್ನು ಕೆಲವು ಪೂರ್ಣಗೊಂಡಿವೆ. ಹಾಗಾಗಿ ಅರ್ಧಕ್ಕೆ ನಿಂತ ಕಾಮಗಾರಿಗಳಿಗೆ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಸಚಿವರು ಗಮನಹರಿಸುತ್ತಿಲ್ಲ. ಕೂಡಲೇ ಜಿಲ್ಲಾ ಸಚಿವರು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ನೀಡಬೇಕು. ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾದ ನಷ್ಟದ ಬಗ್ಗೆ ಸರ್ಕಾರ ಕೂಡಲೇ ಶ್ವೇತ ಪತ್ರ ಹೊರಡಿಸಬೇಕು ಎಂದು ತಿಳಿಸಿದರು.

ಸಚಿವ ಮಧು ಬಂಗಾರಪ್ಪ ಅವರಿಗೆ ಸಿಕ್ಕಿರುವ ಇಲಾಖೆ ಪವಿತ್ರವಾದುದು. ಅವರು ಹೊಸಬರು. ಮೊದಲು ಆ ಇಲಾಖೆಯ ಬಗ್ಗೆ ತಿಳಿದುಕೊಳ್ಳಲಿ, ಅಧ್ಯಯನ ಮಾಡಲಿ. ನಂತರ ತೀರ್ಮಾನ ತೆಗೆದುಕೊಳ್ಳಲಿ. ಅವರ ಬಗ್ಗೆ ನಾನು ಟೀಕೆ ಮಾಡುವುದಿಲ್ಲ ಎಂದು ಹೇಳಿದರು.
ಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಪ್ರಮುಖರಾದ ಜಗದೀಶ್, ಶಿವರಾಜ್, ನಾಗರಾಜ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ:ರಾಜ್ಯದಲ್ಲಿ ಈವರೆಗೆ ಮಳೆಗೆ 38 ಮಂದಿ ಸಾವು, ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ: ಸಿಎಂ ಸಿದ್ದರಾಮಯ್ಯ ಘೋಷಣೆ

Last Updated : Jul 26, 2023, 11:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.