ETV Bharat / state

ಶಿವಮೊಗ್ಗ: ಬೈಕ್​ಗೆ ಡಿಕ್ಕಿ ತಪ್ಪಿಸಲು ಹೋಗಿ KSRTC ಬಸ್ ಪಲ್ಟಿ: 20 ಪ್ರಯಾಣಿಕರಿಗೆ ಗಾಯ

author img

By

Published : Aug 4, 2023, 6:02 PM IST

KSRTC Bus overturned: ಎದುರಿಗೆ ಬಂದ ಬೈಕ್​ಗೆ ಡಿಕ್ಕಿ ಹೊಡೆಯವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್​ ಪಲ್ಟಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್​
ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್​

ಘಟನೆಯ ಬಗ್ಗೆ ಚಾಲಕರ ಹೇಳಿಕೆ

ಶಿವಮೊಗ್ಗ: ಸಾಗರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್​ಗೆ ​ಬೈಕ್ ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಾಗರ ತಾಲೂಕು ಉಳ್ಳೂರು ಗ್ರಾಮದ ಬಳಿ ಇಂದು ನಡೆದಿದೆ. ಬಸ್ ಶಿವಮೊಗ್ಗದಿಂದ ಸಾಗರದ ಕಡೆ ಬರುತ್ತಿತ್ತು. ಈ ವೇಳೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಸಣ್ಣಪ್ಪ ಪ್ರಯತ್ನಿಸಿದ್ದಾರೆ. ಆದರೆ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.

ಬಸ್ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಹಾಗೂ ಇತರರು ಬಸ್​ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್​ ಚಾಲಕ ಸಣ್ಣಪ್ಪ ಪ್ರತಿಕ್ರಿಯಿಸಿ, "ಶಿವಮೊಗ್ಗದಿಂದ ಸಾಗರದ ಕಡೆ ಬಸ್​ ಹೊರಟಿತ್ತು. ಈ ವೇಳೆ ಎದುರಿಗೆ ಬೈಕ್ ಸವಾರನaರ್ವ ಮೊಬೈಲ್‌ನಲ್ಲಿ ಮಾತನಾಡುತ್ತಾ ಬರುತ್ತಿದ್ದ. ಆತ ಬಸ್ ಕಡೆಯೇ ಬಂದಿದ್ದರಿಂದ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಾನು ಎಡಕ್ಕೆ ಸ್ಟೇರಿಂಗ್​ ತಿರುಗಿಸಿದೆ. ಹಾಗಾಗಿ ನಿಯಂತ್ರಣ ತಪ್ಪಿ ಬಸ್ ರಸ್ತೆಯಿಂದ ಕೆಳಗಿಳಿದು ಪಲ್ಟಿಯಾಯಿತು. ಬಸ್​ನಲ್ಲಿದ್ದ 25 ಮಂದಿ ಇದ್ದೆವು. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನಿಬ್ಬರಿಗೆ ಗಂಭೀರ ಗಾಯವಾಗಿದೆ" ಎಂದು ತಿಳಿಸಿದರು.

ಕೆಎಸ್​ಆರ್​ಟಿಸಿ ಬಸ್​ ಪಲ್ಟಿ
ಕೆಎಸ್​ಆರ್​ಟಿಸಿ ಬಸ್​ ಪಲ್ಟಿ

ಗಾಯಾಳು ಗಿರೀಶ್​ ಮಾತನಾಡಿ, "ಬಸ್​ ಎದುರಿಗೆ ಬೈಕ್​ ಸವಾರ ಮೊಬೈಲ್‌ನಲ್ಲಿ ಮಾತಾಡುತ್ತ ಏಕಾಏಕಿ ಬಂದಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾಗಿದೆ" ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದರು.

ವಿದ್ಯುತ್​ಕಂಬಕ್ಕೆ ಬಸ್​ ಡಿಕ್ಕಿ: ಎರಡು ದಿನಗಳ ಹಿಂದೆ ಖಾಸಗಿ ಬಸ್​ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಸ್ಸಿನಲ್ಲಿದ್ದ 35 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿವಮೊಗ್ಗದ ಗೆಣಸಿಕುಣಿ ಸಮೀಪ ನಡೆದಿತ್ತು. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಹೊಳೆಬಾಗಿಲು ಬಳಿಯಿಂದ ಸಾಗರ ಪಟ್ಟಣಕ್ಕೆ ಬರುತ್ತಿದ್ದ ಎಸ್.ಬಿ.ಕೆ. ಹೆಸರಿನ ಖಾಸಗಿ ಬಸ್ ಅತಿ ವೇಗದ ಚಾಲನೆಯಿಂದಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಬಸ್ಸಿನಲ್ಲಿ ಒಟ್ಟು 45 ಪ್ರಯಾಣಿಕರಿದ್ದರು. ಈ ಪೈಕಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡಿದ್ದರು. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ: 35 ಜನ ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.