ನಂದಿತಾ ನಿಗೂಢ ಸಾವು ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಆಗ್ರಹಿಸಿ ಮನವಿ

author img

By

Published : Jun 22, 2020, 3:16 PM IST

shimogga

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿ ನಂದಿತಾ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಎನ್​ಎಸ್​ಯುಐ ಕಾರ್ಯಕರ್ತರಿಂದ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ: ನಂದಿತಾ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಎನ್​ಎಸ್​ಯುಐ ಕಾರ್ಯಕರ್ತರಿಂದ ಮನವಿ ಸಲ್ಲಿಸಲಾಯಿತು.

ನಂದಿತಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಎನ್​ಎಸ್​ಯುಐ ಕಾರ್ಯಕರ್ತರಿಂದ ಮನವಿ

2014ರ ಅಕ್ಟೋಬರ್ 31ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳೆಬೈಲು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿ ನಂದಿತಾ ನಿಗೂಢವಾಗಿ ಸಾವನ್ನಪ್ಪಿದ್ದಳು. ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಹಾಗಾಗಿ ನಂದಿತಾ ನಿಗೂಢ ಸಾವಿನ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಮೂಲಕ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕು. ಈ ಪ್ರಕರಣದಲ್ಲಿ ಯಾರೇ ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನು ತನಿಖೆಯನ್ನು ಸಿಬಿಐಗೆ ವಹಿಸಲು ವಿಳಂಬ ಮಾಡಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.