ETV Bharat / state

ಸಾಗರ: ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ರೋಗಿಯಿಂದ ಸಿಬ್ಬಂದಿ ಮೇಲೆ ಹಲ್ಲೆ

author img

By

Published : Aug 12, 2021, 8:03 PM IST

ವಿಷ ಕುಡಿದು ಆಸ್ಪತ್ರೆ ಸೇರಿದ್ದ ರೋಗಿಯೊಬ್ಬ ಆಸ್ಪತ್ರೆ ಸಿಬ್ಬಂದಿ ಮೇಲೆ ಕಬ್ಬಿಣದ ರಾಡ್​ನಿಂದ ತೀವ್ರವಾಗಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

patient assaults hospital staff in sagara
ರೋಗಿಯಿಂದ ಸಿಬ್ಬಂದಿ ಮೇಲೆ ಹಲ್ಲೆ

ಶಿವಮೊಗ್ಗ: ವಿಷ ಕುಡಿದು ಚಿಕಿತ್ಸೆಗೆಂದು ಬಂದಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.‌

ರೋಗಿಯಿಂದ ಸಿಬ್ಬಂದಿ ಮೇಲೆ ಹಲ್ಲೆ

ವಿಷ ಸೇವಿಸಿದ್ದ ಮಂಜುನಾಥ್ ಎಂಬಾತನನ್ನು ಗುರುವಾರ ಸಾಗರದ ಸರ್ಕಾರಿ ಆಸ್ಪತ್ರೆಗೆ ಕಾರ್ಗಲ್​ನಿಂದ ಚಿಕಿತ್ಸೆಗೆಂದು ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ಡಿ ದರ್ಜೆ ನೌಕರ ಮಧು ಎಂಬಾತ ಮಂಜುನಾಥ್​ನಿಗೆ ವಾಂತಿ ಮಾಡಿಸಲು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಮಂಜುನಾಥ್ ಮಧುವಿನ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಮಧು ತಲೆ ಹಾಗೂ ಬೆನ್ನಿಗೆ ತೀವ್ರ ಗಾಯಗಳಾಗಿ ರಕ್ತಸ್ರಾವವಾಗಿದೆ.

ತಕ್ಷಣ ಆಸ್ಪತ್ರೆಯ ಇತರ ಸಿಬ್ಬಂದಿ ಬಂದು ಮಧುವನ್ನು ಬಿಡಿಸಿಕೊಂಡಿದ್ದಾರೆ. ಆದರೂ ಸಹ ಮಂಜುನಾಥ್ ನೀವು ಕಾರ್ಗಲ್​ಗೆ ಬನ್ನಿ‌ ನೋಡಿ‌ಕೊಳ್ಳುತ್ತೇನೆ ಎಂದು ಆವಾಜ್ ಹಾಕಿದ್ದಾನೆ. ಮಂಜುನಾಥ್ ವಿಷ ಕುಡಿದ ಮತ್ತಿನಲ್ಲಿ ಈ ರೀತಿ ನಡೆದು‌ಕೊಂಡಿರುವ ಸಾಧ್ಯತೆ ಇದೆ. ಈ ಘಟನೆಯ ಬಗ್ಗೆ ತಾಲೂಕು ವೈದ್ಯರ ಸಂಘದ ಕಾರ್ಯದರ್ಶಿ ಮೋಹನ್ ಖಂಡನೆ ವ್ಯಕ್ತಪಡಿಸಿದ್ದು, ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.