ETV Bharat / state

ಶಿವಮೊಗ್ಗ: ಹೆತ್ತ ತಾಯಿಯ ಮನೆಗೇ ಕನ್ನ ಹಾಕಿದ ಮಗನ ಬಂಧನ!

author img

By

Published : Dec 14, 2022, 8:32 PM IST

person-arrested-in-home-theft-case
ಶಿವಮೊಗ್ಗ: ಹೆತ್ತ ತಾಯಿಯ ಮನೆಗೇ ಕನ್ನ ಹಾಕಿದ ಮಗ ಅಂದರ್!

ಹೆತ್ತ ತಾಯಿಯ ಮನೆಯಲ್ಲಿ ಕಳ್ಳತನ ಮಾಡಿದ ಮಗನನ್ನು ಶಿವಮೊಗ್ಗದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ: ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಇಲ್ಲಿನ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು, ಪ್ರತ್ಯೇಕ ಮನೆಯಲ್ಲಿ ವಾಸಿಸುತ್ತಿದ್ದ. ಆಗಾಗ ತಾಯಿಯ ಮನೆಗೂ ಬಂದುಹೋಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯಿಂದ 2.50 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮ್ಯಾಟ್ರಿಮೊನಿಯಲ್ಲಿ ಪರಿಚಯವಾದ ಯುವತಿಯಿಂದ ಮೋಸ ಹೋದ ಶಿಕ್ಷಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.