ETV Bharat / state

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ನರೇಂದ್ರ ಮೋದಿ.. ಯಡಿಯೂರಪ್ಪ ಗುಣಗಾನ ಮಾಡಿದ ಪ್ರಧಾನಿ

author img

By

Published : Feb 27, 2023, 1:10 PM IST

Updated : Feb 27, 2023, 2:04 PM IST

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ- ಪ್ರಧಾನಿ ನರೇಂದ್ರ ಮೋದಿ ಅವರಿಂದ ಚಾಲನೆ - ಸೋಗಾನೆಯಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ನರೇಂದ್ರ ಮೋದಿ

ಶಿವಮೊಗ್ಗ: ನಗರದ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಬಳಿಕ ಕರ್ನಾಟಕದ ಸಹೋದರಿ, ಸಹೋದರರೇ ಎಂದು ಮಾತು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಕುವೆಂಪು ಹುಟ್ಟಿದ ನಾಡಿಗೆ ನಮಸ್ಕಾರ ಎಂದರು.

ಯಡಿಯೂರಪ್ಪಗೆ ವಿಶೇಷ ಗೌರವ: 80 ನೇ ಜನ್ಮದಿನಕ್ಕೆ ಕಾಲಿಟ್ಟ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದರು. ಅಲ್ಲದೇ, ತಮ್ಮಲ್ಲಿರುವ ಮೊಬೈಲ್​ ಟಾರ್ಚ್​ ಹೊತ್ತಿಸುವ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಿ ಎಂದು ಸಭಿಕರಲ್ಲಿ ಮನವಿ ಮಾಡಿದರು.

ಅಭಿವೃದ್ಧಿಗಾಗಿ ಡಬಲ್​ ಎಂಜಿನ್​ ಸರ್ಕಾರ: ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. ಡಬಲ್​ ಎಂಜಿನ್​ ಸರ್ಕಾರದಿಂದ ರಾಜ್ಯ ಪ್ರಗತಿಯತ್ತ ಸಾಗಿದೆ. ಈ ಹಿಂದೆ ಹಾರಾಟಕ್ಕಾಗಿ ವಿಮಾನಗಳನ್ನು ವಿದೇಶಗಳಿಂದ ಖರೀದಿ ಮಾಡಲಾಗುತ್ತಿತ್ತು. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸ್ವದೇಶಿ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಹವಾಯಿ ಚಪ್ಪಲಿ ಹಾಕುವವನೂ ವಿಮಾನದಲ್ಲಿ ಹಾರಾಟ ಮಾಡಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಉಡಾನ್​ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದರು.

ಬಡವರ ಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಈ ಹಿಂದಿನ ಸರ್ಕಾರಗಳು ಸಣ್ಣ ಸಣ್ಣ ಗ್ರಾಮಗಳನ್ನು ನಿರ್ಲಕ್ಷಿಸಿದ್ದವು. ಆದರೆ, ಡಬಲ್​ ಎಂಜಿನ್​ ಸರ್ಕಾರ ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯನ್ನು ಹೊಂದಿದೆ. ಇದು ನಮ್ಮ ಸರ್ಕಾರದ ಕೆಲಸದ ಪರಿಯಾಗಿದೆ ಎಂದು ಬಣ್ಣಿಸಿದರು.

ಮಲೆನಾಡ ಅಭಿವೃದ್ಧಿಗೆ ಸರ್ಕಾರ ಬದ್ಧ: ಶಿವಮೊಗ್ಗ ಮಲೆನಾಡಿನ ಹೆಬ್ಬಾಗಿಲಾಗಿದೆ. ಇಲ್ಲಿರುವ ಆಶ್ರಮಗಳು, ಜೋಗಜಲಪಾತ ಸಂಸ್ಕೃತಿ ನಿಸರ್ಗದ ಪ್ರತೀಕವಾಗಿದೆ. 40 ಸಾವಿರಕ್ಕೂ ಅಧಿಕ ಮನೆಗಳಿಗೆ ನಲ್ಲಿಗಳ ಮೂಲಕ ಪ್ರತಿ ಮನೆಗೆ ನೀರು ಒದಗಿಸಲಾಗಿದೆ. ಬಿಜೆಪಿ ಸರ್ಕಾರ ಹಿಂದುಳಿದವರ ಅಭಿವೃದ್ಧಿಯ ಪರವಾಗಿದೆ ಎಂದು ಸರ್ಕಾರದ ಯೋಜನಗೆಳನ್ನು ಸಾಧನೆಯನ್ನು ಪ್ರಧಾನಿಗಳು ರಾಜ್ಯದ ಜನರ ಮುಂದಿಟ್ಟರು.

ಕೋಟೆಗಂಗೂರಿನಲ್ಲಿ ಟರ್ಮಿನಲ್​ ನಿರ್ಮಾಣ: ಮಲೆನಾಡಿಗೆ ರೈಲ್ವೆ ಸಂಪರ್ಕವನ್ನು ಹೆಚ್ಚಿಸಲಾಗುವುದು. ಕೋಟೆಗಂಗೂರಿನಲ್ಲಿ ಹೊಸ ಟರ್ಮಿನಲ್​ ನಿರ್ಮಾಣ ಮಾಡಲಾಗುವುದು. ಈ ಮೂಲಕ ರಸ್ತೆ ಮತ್ತು ವಾಯು ಸಂಪರ್ಕವನ್ನು ಬಲಪಡಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ಸಚಿವರು, ಬಿಜೆಪಿ ನಾಯಕರು ವೇದಿಕೆಯಲ್ಲಿದ್ದರು.

ಓದಿ: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ.. ಮೋದಿಯನ್ನು ಬರಮಾಡಿಕೊಂಡ ಬಿಜೆಪಿ ನಾಯಕರು

Last Updated : Feb 27, 2023, 2:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.