ETV Bharat / state

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಪ್ರೊಸೆಸ್ ಸರ್ವರ್ - ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

author img

By ETV Bharat Karnataka Team

Published : Dec 19, 2023, 3:23 PM IST

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 33 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ

Shivamogga District Court Recruitment For Peon and process Server
Shivamogga District Court Recruitment For Peon and process Server

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್​​ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 33 ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 33 ಹುದ್ದೆಗಳ ವಿವರ ಹೀಗಿದೆ.

  • ಪ್ರೊಸೆಸ್​ ಸರ್ವರ್​​ - 5
  • ಜವಾನ - 28

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೇತನ: ಪ್ರೊಸೆಸ್​​ ಸರ್ವ್​​ ಹುದ್ದೆಗೆ 19,950-37,900 ರೂ ಮಾಸಿಕ ವೇತನ ಹಾಗೂ ಜವಾನ ಹುದ್ದೆಗೆ 17,000- 28,950 ರೂ ಮಾಸಿಕ ವೇತನ ನಿಗದಿ ಮಾಡಲಾಗಿದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಪೂರ್ಣಗೊಂಡಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಹುದ್ದೆಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನ ಹಾಗೂ ವಿಧವಾ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ವಿವರ: ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 100 ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್​​ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ಅಭ್ಯರ್ಥಿಗಳು ಡಿಸೆಂಬರ್​ 15 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿ 16 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಡಿಸೆಂಬರ್​ 17 ಆಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರಗಳಿಗೆ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://shivamogga.dcourts.gov.in/notice-category/recruitments ಅಥವಾ https://karnatakajudiciary.kar.nic.in/districtrecruitment.php ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಟ; ಇಲ್ಲಿದೆ ಹುದ್ದೆ ವಿವರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.