ETV Bharat / state

ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ಮಾಡುತ್ತೇವೆ: ಸಚಿವ ಭೈರತಿ ಬಸವರಾಜ್

author img

By

Published : Jun 13, 2021, 7:43 AM IST

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ವಿಕ್ಷೀಸಿ, ಸಂಪೂರ್ಣ ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ಮಾಡಲಿದ್ದೇವೆ ಎಂದರು.

The aim of making Shivamogga  a model city
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿಕೆ

ಶಿವಮೊಗ್ಗ: ನಗರವನ್ನು ಮಾದರಿ ನಗರವನ್ನಾಗಿ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಗರದ ಸ್ಮಾರ್ಟ್ ಸಿಟಿ ಕಾಮಗಾರಿ ವಿಕ್ಷೀಸಿದರು. ನಗರದ ದುರ್ಗಿ ಗುಡಿ ಸರ್ಕಾರಿ ಶಾಲೆಯ ಸ್ಮಾರ್ಟ್ ಕ್ಲಾಸ್ ಹಾಗೂ ಮಿಷನ್ ಕಾಂಪೌಂಡ್​ನಲ್ಲಿ ನಿರ್ಮಾಣವಾಗಿರುವ ಪಾರ್ಕ್ ಹಾಗೂ ಗಾಂಧಿ ಪಾರ್ಕ್ ವೀಕ್ಷಣೆ ಮಾಡಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿಕೆ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭೈರತಿ ಬಸವರಾಜ, ಸಂಪೂರ್ಣ ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ಮಾಡಲಿದ್ದೇವೆ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಉತ್ತಮ ರೀತಿಯಲ್ಲಿ ನಡೆಯುತ್ತಿವೆ ಎಂದು ಹೇಳಿದರು.

ಕೆಲವೊಂದು ಭಾಗದಲ್ಲಿ ಕಾಮಗಾರಿ ವಿಳಂಬ ಆಗಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಮಳೆಗಾಲದಲ್ಲಿ ಕಾಮಗಾರಿ ವಿಳಂಬವಾಗದೇ ತ್ವರಿತಗತಿಯಲ್ಲಿ ಕಾಮಗಾರಿ ನಡೆಸಲು ತಿಳಿಸಲಾಗಿದೆ ಎಂದರು.

ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡಿ, ಗಾಂಧಿ ಪಾರ್ಕ್ ಮುಂಭಾಗದಲ್ಲಿ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ಕ್ಯಾಬಿನೆಟ್​ನಲ್ಲಿ ಚರ್ಚಿಸಲಾಗಿದೆ. ಬರುವ ದಿನಗಳಲ್ಲಿ ಬಸವೇಶ್ವರರ ಪುತ್ಥಳಿ ನಿರ್ಮಾಣವಾಗಲಿದೆ ಎಂದರು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.