ETV Bharat / state

ತುಮಕೂರು: ಮದ್ಯದ ಅಮಲಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ

author img

By

Published : Nov 19, 2020, 12:50 PM IST

ತುಮಕೂರು ಜಿಲ್ಲೆಯಲ್ಲಿ ಕುಡುಕ ಪತಿವೋರ್ವ ಪತ್ನಿಯ ಪ್ರಾಣವನ್ನೇ ತೆಗೆದಿದ್ದಾನೆ. ಹಥರತ್ ಭಾನು ಮತ್ತು ಪುತ್ರ ಮಹಮ್ಮದ್ ಅಲಿ ಮನೆಯಲ್ಲಿ ಮಲಗಿದ್ದ ವೇಳೆ ದೊಣ್ಣೆಯಿಂದ ಇಬ್ಬರ ತಲೆಗೆ ಬಲವಾಗಿ ಹೊಡೆದು ಕೊಲೆಗೆ ಯತ್ನಿಸಿದ್ದಾನೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

a-man-brutally-killed-his-wife-in-tumkur
ಮದ್ಯದ ಅಮಲಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯ ಬರ್ಬರ ಹತ್ಯೆ

ತುಮಕೂರು: ಮದ್ಯದ ಅಮಲಿನಲ್ಲಿ ದೊಣ್ಣೆಯಿಂದ ಹೊಡೆದು ಹೆಂಡತಿಯನ್ನು ವ್ಯಕ್ತಿವೋರ್ವ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಹಥರತ್ ಭಾನು(32) ಕೊಲೆಗೀಡಾಗಿರುವ ಮಹಿಳೆ.

ಕೊರಟಗೆರೆ ಪಟ್ಟಣದ 3ನೇ ವಾರ್ಡಿನ ಶ್ರೀನಿವಾಸ ಕಾಲೇಜಿನ ಸಮೀಪ ವಾಸವಾಗಿದ್ದ ಚಾಂದುಪಾಷ ಎಂಬಾತ ಕೊಲೆ ಮಾಡಿದ್ದು, ಈತನನ್ನು ಕೊರಟಗೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪತ್ನಿ ಹಥರತ್ ಭಾನು ಮತ್ತು ಪುತ್ರ ಮಹಮ್ಮದ್ ಅಲಿ ಮನೆಯಲ್ಲಿ ಮಲಗಿದ್ದ ವೇಳೆ ದೊಣ್ಣೆಯಿಂದ ಇಬ್ಬರ ತಲೆಗೆ ಬಲವಾಗಿ ಹೊಡೆದು ಕೊಲೆಗೆ ಯತ್ನಿಸಿದ್ದಾನೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಇನ್ನು ಗಂಭೀರವಾಗಿ ಗಾಯಗೊಂಡ ಪುತ್ರ ತುಮಕೂರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ.

ಮಹಿಳೆಯ ಶವವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಸಿಪಿಐ ನದಾಫ್​ ಮತ್ತು ಪಿಎಸ್​​ಐ ಮುತ್ತುರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.