ETV Bharat / state

ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯರು.. ವೈದ್ಯಾಧಿಕಾರಿಗಳಿಗೆ ತರಾಟೆ

author img

By

Published : Nov 4, 2022, 9:27 PM IST

ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಇಂದು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ನವ ಜಾತ ಶಿಶುಗಳು ಹಾಗೂ ಬಾಣಂತಿಯರ ಚಿಕಿತ್ಸೆಗೆ ಸಂಬಂಧಪಟ್ಟಂತೆ ಸ್ಪಷ್ಟ ಮಾಹಿತಿ ತೆಗೆದುಕೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಇದ್ದಂತಹ ಕೆಲವು ಲೋಪದೋಷಗಳ ಕುರಿತು ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯರು
ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯರು

ತುಮಕೂರು: ತುಮಕೂರಿನಲ್ಲಿ ಬಾಣಂತಿ ಹಾಗೂ ಎರಡು ಹಸುಗೂಸುಗಳ ಸಾವು ಸಂಭವಿಸಿದ ನಂತರ ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಎಚ್ಚೆತ್ತುಕೊಂಡಿದ್ದು, ಇಂದು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ನವ ಜಾತ ಶಿಶುಗಳು ಹಾಗೂ ಬಾಣಂತಿಯರ ಚಿಕಿತ್ಸೆಗೆ ಸಂಬಂಧಪಟ್ಟಂತೆ ಸ್ಪಷ್ಟ ಮಾಹಿತಿ ತೆಗೆದುಕೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಇದ್ದಂತಹ ಕೆಲವು ಲೋಪದೋಷಗಳ ಕುರಿತು ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಸದಸ್ಯರು

ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ನಾಗನಗೌಡ ನೇತೃತ್ವದಲ್ಲಿ ಭೇಟಿ ನೀಡಿ ಆಯೋಗದ ಸದಸ್ಯರು ಮಾಹಿತಿ ಪಡೆದುಕೊಂಡರು. ಅಲ್ಲದೇ ನಿನ್ನೆ ಮೃತಪಟ್ಟ ತಾಯಿ ಮತ್ತು ಶಿಶುಗಳ ಕುರಿತು ಇನ್ನಷ್ಟು ಮಾಹಿತಿ ಪಡೆಯಲು ಶವಾಗಾರಕ್ಕೂ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಓದಿ: ತುಮಕೂರಿನಲ್ಲಿ ಬಾಣಂತಿ-ಅವಳಿ ಮಕ್ಕಳು ಸಾವು ಪ್ರಕರಣ: ನಾಲ್ವರು ಸಿಬ್ಬಂದಿ ಅಮಾನತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.