ರಾಜ್ಯಕ್ಕೆ ಅಗೌರವ ತರುವ ಕೆಲಸ ಬಿಜೆಪಿ ಮಾಡಿದೆ : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

author img

By

Published : Mar 5, 2023, 6:31 PM IST

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ತುಮಕೂರು: ರಾಷ್ಟ್ರದ ನಾಯಕರ ಬಳಿ ಅನೇಕ ವಿಚಾರಗಳನ್ನು ಚರ್ಚೆ ಮಾಡಿದ್ದೀವಿ. ಕಳೆದ ಮೂರೂವರೆ ವರ್ಷದಿಂದ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ. ಇಡೀ ರಾಜ್ಯಕ್ಕೆ ಅಗೌರವ ತರುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಕೊರಟಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಕ್ಕೆ ಆಧಾರ ಕೊಡಿ ಎಂದು ಕೇಳಿದ್ರು. ಕಾಂಟ್ರಾಕ್ಟರ್ಸ್​ ಅಸೋಸಿಯೇಷನ್ ಅಧ್ಯಕ್ಷರು ನೇರವಾಗಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಮೋದಿ ನಾನು ತಿನ್ನೋದಿಲ್ಲ, ತಿನ್ನೋರಿಗೂ ಬಿಡಲ್ಲ ಎಂದು ಹೇಳ್ತಾರೆ. ಸದ್ಯಕ್ಕೆ ನಡೆದಿರುವ ಲೋಕಾಯುಕ್ತ ದಾಳಿ ಬಗ್ಗೆ ಮಾತನಾಡುತ್ತಿಲ್ಲ. ಇದೀಗ ಎಲ್ಲ ಕಚೇರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆದಿದ್ದೇವೆ ಎಂದು ಡಿಕೆಶಿ ಹೇಳಿದರು.

ಭ್ರಷ್ಟಾಚಾರದಿಂದ ಸಾವಿರಾರು ಜನ ನೊಂದಿದ್ದಾರೆ. ಸಿಎಂ ಕೇಳಿದ ಸಾಕ್ಷಿಗೆ ಲೋಕಾಯುಕ್ತ ಅಧಿಕಾರಿಗಳು ಸಾಕ್ಷಿ ಕೊಟ್ಟಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ ಎಂದರು. ಎಲ್ಲಾ ಲೋಕಾಯುಕ್ತ ಅಧಿಕಾರಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ರಾಜೀನಾಮೆಗೂ ನಾವು ಒತ್ತಾಯ ಮಾಡಿದ್ದೇವೆ ಎಂದು ಹೇಳಿದರು.

9ನೇ ತಾರೀಖಿನ ಬೆಳಗ್ಗೆ 9 ಗಂಟೆಗೆ ರಾಜ್ಯಾದ್ಯಂತ ಭ್ರಷ್ಟಾಚಾರದ ಪಾರ್ಟಿ ವಿರುದ್ಧ ಬಂದ್ ಆಚರಣೆ ಮಾಡಲಾಗುವುದು. ಬಂದ್​ನಿಂದಾಗಿ ಯಾವುದೇ ಶಾಲೆ, ಆಸ್ಪತ್ರೆಗೆ ತೊಂದರೆ ಆಗದಂತೆ ಪ್ರತಿಭಟನೆ ನಡೆಸಲಾಗುವುದು. ಎಲ್ಲಾ ವ್ಯಾಪಾರಿಗಳು ಬೆ. 9 ಗಂಟೆಯಿಂದ 11 ಗಂಟೆವರೆಗೆ ಸಹಕಾರ ನೀಡಬೇಕು. ಕಾನೂನು ಕೈಗೆತ್ತಿಕೊಳ್ಳುವ ಕೆಲಸವನ್ನು ಯಾರೂ ಕೂಡ ಮಾಡಬಾರದು‌ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಸಿಎಂ ಭೇಟಿಯಾದ ಧರ್ಮೇಂದ್ರ ಪ್ರಧಾನ್.. ರೇಸ್ ಕೋರ್ಸ್ ನಿವಾಸದಲ್ಲಿ ಚುನಾವಣಾ ರಣತಂತ್ರದ ಕುರಿತು ಚರ್ಚೆ

ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡಲು ನಿಮ್ಮ ಸಹಕಾರ ಬೇಕು. ಎಲ್ಲಾ ಸಂಘ ಸಂಸ್ಥೆಗಳು ನಮಗೆ ಸಹಕಾರ ಕೊಡಿ. ಎಲ್ಲಾ ವರ್ತಕರಿಗೆ ಒಂದು ಮನವಿ, ಇಡೀ ರಾಜ್ಯದ ಉದ್ದಗಲಕ್ಕೂ ಎರಡು ಗಂಟೆ ಪ್ರತಿಭಟನೆ ಮಾಡಬೇಕು ಎಂದರು. ಮುಂದಿನ ದಿನ ನಮ್ಮ ರಾಜ್ಯದಲ್ಲಿ ಉತ್ತಮ ಸರ್ಕಾರ ಕೊಡುತ್ತೇವೆ. ಜನ ನಮಗೆ ಆಶೀರ್ವಾದ ಮಾಡುತ್ತಾರೆ ಎಂದರು. ಕೊರಟಗೆರೆ ಕಾಂಗ್ರೆಸ್ ಭವನ ಉದ್ಘಾಟಿಸಿ ಇಂತಹ ಭವ್ಯ ಭವನದಲ್ಲಿ ಈ ಮನವಿ ಮಾಡುತ್ತೇನೆ. ಈ ರಾಜ್ಯಕ್ಕೆ ಭ್ರಷ್ಟಾಚಾರದ ಹೆಸರಿನಲ್ಲಿ ಕಳಂಕ ಬಂದಿದೆ. ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯ ಮಾಡ್ತಿದ್ದೀವಿ ಎಂದರು.

ಇದನ್ನೂ ಓದಿ : ವೇತನ ಹೆಚ್ಚಳಕ್ಕೆ ಸಿಗದ ಸ್ಪಂದನೆ : ಮಾ. 24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರಿಂದ ಕರೆ

ಯಾರನ್ನೂ ಬಂಧಿಸಿ ಎಂದು ಹೇಳಲ್ಲ. ಇದಕ್ಕೆ ತಲೆದಂಡ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ಅಷ್ಟೆ. 9 ನೇ ತಾರೀಖಿನ ಬೆಳಗ್ಗೆ 9 ರಿಂದ 11 ಗಂಟೆವರೆಗೆ ಕೇವಲ ಎರಡು ಗಂಟೆ ಮಾತ್ರ ಬಂದ್ ಮಾಡಲು ಕಾಂಗ್ರೆಸ್ ನಿರ್ಧಾರ ಮಾಡಲಿದೆ ಎಂದರು. ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ ಎಂಬ ವಿಚಾರದಲ್ಲಿ ಈ ಬಗ್ಗೆ ಯಾರೂ ಕೂಡ ನಮ್ಮನ್ನ ಸಂಪರ್ಕ ಮಾಡಿಲ್ಲ. ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ವಿಚಾರಿಸಿದ್ದೀನಿ ಎಂದು ಹೇಳಿದರು.

ಇದನ್ನೂ ಓದಿ : ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ: ಬಿ. ಕೆ. ಹರಿಪ್ರಸಾದ್ ಲೇವಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.