ETV Bharat / state

ತುಮಕೂರು ಮಹಿಳೆ ಅತ್ಯಾಚಾರ, ಕೊಲೆ.. 26 ವರ್ಷಗಳ ಬಳಿಕ ಅಪರಾಧಿಗೆ ಜೀವಾವಧಿ ಶಿಕ್ಷೆ..

author img

By

Published : Dec 29, 2021, 2:31 PM IST

ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ತಾರಕೇಶ್ವರಗೌಡ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಲಂ 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ಕಲಂ 201 ಐಪಿಸಿ ಅಡಿಯಲ್ಲಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ..

rape and murder of woman
ಮಹಿಳೆ ಅತ್ಯಾಚಾರ ಕೊಲೆ ಪ್ರಕರಣ

ತುಮಕೂರು : ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಗೆ ತುಮಕೂರಿನ 4ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 26 ವರ್ಷಗಳ ಹಿಂದೆ ನಡೆದ ಪ್ರಕರಣ ಇದಾಗಿದೆ.

ಸಿದ್ದಹನುಮ ಎಂಬಾತ ಎಸಗಿದ್ದ ಅಪರಾಧ ಸಾಬೀತಾದ ಹಿನ್ನೆಲೆ ಕೋರ್ಟ್ ಈ ಆದೇಶ ನೀಡಿದೆ. 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನನ್ನು ಇತ್ತೀಚೆಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಕರಕಲಘಟ್ಟ ಗ್ರಾಮದ ಮಹಿಳೆಯು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅತ್ಯಾಚಾರ ನಡೆದಿತ್ತು. ಮದ್ಯ ಸೇವಿಸಿದ್ದ ಸಿದ್ದಹನುಮ ಕೃತ್ಯದ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿ, ಮೈಮೇಲಿದ್ದ ಒಡವೆಗಳೊಂದಿಗೆ ಪರಾರಿಯಾಗಿದ್ದ.

1994ರಲ್ಲಿ ಘಟನೆ : 1994ರಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಕೊರಟಗೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸಿದ್ದಹನುಮನನ್ನು ಇತ್ತೀಚೆಗೆ ಪತ್ತೆ ಮಾಡಿದ್ದ ಸಿಪಿಐ ನದಾಪ್ ಮತ್ತು ಪಿಎಸ್ಐ ಮಂಜುನಾಥ್ ನೇತೃತ್ವದ ತಂಡವು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ತಾರಕೇಶ್ವರಗೌಡ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಲಂ 302 ಐಪಿಸಿ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ಕಲಂ 201 ಐಪಿಸಿ ಅಡಿಯಲ್ಲಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡದ ಹಣದಲ್ಲಿ ಮೃತಳ ಸಹೋದರಿಗೆ ಪರಿಹಾರವಾಗಿ 50 ಸಾವಿರ ರೂ. ಹಣ ನೀಡುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎಮ್ ನಿರಂಜನಮೂರ್ತಿ ವಾದ ಮಂಡಿಸಿದ್ದರು.

ಇದನ್ನೂ ಓದಿ: ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಇಟ್ಟ ದುಷ್ಕರ್ಮಿ.. ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.