ETV Bharat / state

ತುಮಕೂರು ಲೋಕಸಭಾ ಕ್ಷೇತ್ರದಿಂದ ದೇವೇಗೌಡರು ಸ್ಫರ್ಧಿಸುವುದು ಡೌಟು: ಸಚಿವ ಶ್ರೀನಿವಾಸ್​​​

author img

By

Published : Mar 14, 2019, 8:22 PM IST

ಜೆಡಿಎಸ್​ ಅಭ್ಯರ್ಥಿಯಾಗಿ ಹೆಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದದಿಂದ ಕಣಕ್ಕಿಳಿಯುವ ಬಗ್ಗೆ ಸಚಿವ ಎಸ್​.ಆರ್.ಶ್ರೀನಿವಾಸ್ ಪ್ರತಿಕ್ರಿಯೆ ಹೀಗಿದೆ.

ಸಚಿವ ಎಸ್​.ಆರ್.ಶ್ರೀನಿವಾಸ್

ತುಮಕೂರು: ಇಲ್ಲಿನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಹೆಚ್.ಡಿ.ದೇವೇಗೌಡರು ಕಣಕ್ಕಿಳಿಯುವ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರವಾಗಿಲ್ಲ. ಮುಂದೆ ಹೇಗಾದರೂ ಆಗಬಹುದು ಎಂದು ಸಚಿವ ಎಸ್​.ಆರ್.ಶ್ರೀನಿವಾಸ್​ ತಿಳಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್​ ಸಂಸದ ಮುದ್ದಹನುಮೇಗೌಡರಿಗೆ ಕೊಡಬೇಕೆಂಬುದಿತ್ತು. ಆದರೆ, ಬೇರೆ ವಿಧಿ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಪರಸ್ಪರ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಕೊರಟಗೆರೆ, ಮಧುಗಿರಿ, ಪಾವಗಡ ಭಾಗದಲ್ಲಿ ಕಾಂಗ್ರೆಸ್​ನೊಂದಿಗೆ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಸಾಕಷ್ಟು ಗೊಂದಲಗಳಿದ್ದು, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.

ಕಳೆದ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗಳಿಸಿದ ಮತಗಳ ಆಧಾರದ ಮೇಲೆ ಮೈಸೂರು ಮತ್ತು ತುಮಕೂರು ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಕೇಳಿದ್ದೆವು. ಆದರೆ, ಮೈಸೂರು ಲೋಕಸಭಾ ಕ್ಷೇತ್ರವನ್ನು ಪಟ್ಟು ಹಿಡಿದು ಕಾಂಗ್ರೆಸ್ ತೆಗೆದುಕೊಂಡಿದೆ ಎಂದರು.

ಸಚಿವ ಎಸ್​.ಆರ್.ಶ್ರೀನಿವಾಸ್

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರಸ್ಪರ ಹೋರಾಟ ಮಾಡಿದ್ದವು. ಆದರೆ, ಈಗ ಮೈತ್ರಿ ಧರ್ಮದ ಅನ್ವಯ ಕಾಂಗ್ರೆಸ್​ಗೆ ಬಿಟ್ಟುಕೊಟ್ಟಿರುವಂತಹ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಮತ್ತು ಜೆಡಿಎಸ್​ಗೆ ಬಿಟ್ಟು ಕೊಟ್ಟಿರುವಂತಹ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಪರವಾಗಿ ಕೆಲಸ ಮಾಡಬೇಕಿದೆ. ಅಲ್ಲದೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಗೊಂದಲಗಳಿವೆ. ಅದನ್ನು ಸರಿಪಡಿಸಿಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು.

12 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಬೇಕೆಂದು ಕಾಂಗ್ರೆಸ್​ಗೆ ಕೇಳಿದ್ದೆವು. ಅದರಲ್ಲಿ 8 ಕ್ಷೇತ್ರಗಳನ್ನು ಬಿಟ್ಟುಕೊಡಲಾಗಿದೆ. ಕೆಲವೊಂದು ಕ್ಷೇತ್ರವನ್ನು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್​ನವರು ಇರಿಸಿಕೊಳ್ಳಬಹುದಾಗಿತ್ತು. ಆದರೆ, ಅದನ್ನು ಮಾಡಿಲ್ಲ ಎಂದರು.

ಕಳೆದ ಬಾರಿ ತುಮಕೂರು ಲೋಕಸಭೆ ಕ್ಷೇತ್ರದ ಸಂಸದರಾಗಿದ್ದ ಮುದ್ದಹನುಮೇಗೌಡ, ಹಿಂದೆ ಜೆಡಿಎಸ್​ನಲ್ಲಿದ್ದರೂ ನಂತರ ಕಾಂಗ್ರೆಸ್​ಗೆ ಸೇರಿ ಕಣಕ್ಕಿಳಿದಿದ್ದರು. ಚುನಾವಣೆ ವೇಳೆ ಅವರಿಗೆ ಅನುಕಂಪದ ಆಧಾರದ ಮೇಲೆ ಜೆಡಿಎಸ್​ನ ಕಾರ್ಯಕರ್ತರು ಸಹ ಮತ ಹಾಕಿದ್ದರು ಎಂದರು.

ಕಳೆದ ಬಾರಿ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಮೂರು ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆದರೆ, ಈ ಬಾರಿ ಮೈತ್ರಿ ಸೂತ್ರದನ್ವಯ ಕಾಂಗ್ರೆಸ್ ಮತ್ತು ಜೆಡಿಎಸ್​ವತಿಯಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಈ ಬಾರಿ ಜೆಡಿಎಸ್ ಅಭ್ಯರ್ಥಿ ಗೆಲುವು ನಿರಾಯಾಸವಾಗಲಿದೆ ಎಂದರು.

Intro:Body:

Minister SR Shrinivas reaction about Deve Gowdr's competition


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.