ETV Bharat / state

ತುಮಕೂರು: ತಾಯಿ ಮತ್ತು ಮಗುವಿನ ಭೀಕರ ಕೊಲೆ, ಗಂಡನ ಮೇಲೆ ಗುಮಾನಿ

author img

By

Published : Oct 19, 2022, 9:28 AM IST

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ತಾಯಿ ಮತ್ತು ಮೂರು ವರ್ಷದ ಮಗುವನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಸಿಪಿಐ ನದಾಫ್ ಹಾಗೂ ಚೇಳೂರು ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

murder
ತಾಯಿ ಮತ್ತು 3 ವರ್ಷದ ಮಗುವಿನ ಭೀಕರ ಹತ್ಯೆ

ತುಮಕೂರು: ತಾಯಿ ಮತ್ತು ಮೂರು ವರ್ಷದ ಮಗುವನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾವ್ಯ ಹಾಗೂ ಜೀವನ್​ ಕೊಲೆಯಾದವರು. ಮನೆಯಲ್ಲೇ ಇಬ್ಬರ ಶವ ಪತ್ತೆಯಾಗಿವೆ. ಕಾವ್ಯರನ್ನು ಗಂಡನೇ ಕೊಲೆ ಮಾಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಕೊಲೆ ಬಳಿಕ ಆಕೆಯ ಗಂಡ ನಾಪತ್ತೆಯಾಗಿದ್ದು, ಸಾಕಷ್ಟು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಹಾವೇರಿ ಬಳಿ ನಿಧಿ ಆಸೆ ತೋರಿಸಿದ್ದ ವ್ಯಕ್ತಿಯ ಕೊಲೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆ ನಡೆದಿರಬಹುದು ಎಂದು ಪೊಲೀಸರ​ ಪ್ರಾಥಮಿಕ ತನಿಖೆಯಿಂದ ಲಭ್ಯವಾಗಿದೆ. ಸ್ಥಳಕ್ಕೆ ಸಿಪಿಐ ನದಾಫ್ ಹಾಗೂ ಚೇಳೂರು ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.