ETV Bharat / state

ತುಮಕೂರು: ಅಕ್ರಮ ಸ್ಫೋಟಕ ಸಂಗ್ರಹ ಪ್ರದೇಶಗಳ ಮೇಲೆ ಪೊಲೀಸರ ದಾಳಿ

author img

By

Published : Feb 18, 2021, 10:39 PM IST

Tumkur Police attack illegal explosive stockpiles
ಅಕ್ರಮ ಸ್ಫೋಟಕ ಸಂಗ್ರಹ ಪ್ರದೇಶಗಳ ಮೇಲೆ ಪೊಲೀಸರ ದಾಳಿ

ಹುಲಿಯೂರುದುರ್ಗ, ಕುಣಿಗಲ್, ಕ್ಯಾತ್ಸಂದ್ರ, ತಿಪಟೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಎಂಬತ್ತಕ್ಕೂ ಹೆಚ್ಚು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಿವೆ. ಕಲ್ಲು ಗಣಿಗಾರಿಕೆಗೆ ಸ್ಫೋಟಕಗಳನ್ನು ನಿಯಮಾವಳಿ ಪ್ರಕಾರ ಬಳಸಿಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ತುಮಕೂರು: ಜಿಲ್ಲೆಯಲ್ಲಿ ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಲ್ಲಿ ಅಕ್ರಮವಾಗಿ ಸಂಗ್ರಹಿಸುವ ಅಂತಹ ಸ್ಫೋಟಕಗಳ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆ ವತಿಯಿಂದ ತಂಡ ರಚನೆ ಮಾಡಲಾಗಿದ್ದು, ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಅಕ್ರಮ ಸ್ಫೋಟಕ ಸಂಗ್ರಹ ಪ್ರದೇಶಗಳ ಮೇಲೆ ಪೊಲೀಸರ ದಾಳಿ

ಓದಿ: 2014ರ ನಂತರ ಐಪಿಎಲ್​ನಲ್ಲಿ ಪೂಜಾರಾ ಸೇಲ್​... ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು ಎಂದ ಚೇತೇಶ್ವರ್​!

ಹುಲಿಯೂರುದುರ್ಗ, ಕುಣಿಗಲ್, ಕ್ಯಾತ್ಸಂದ್ರ, ತಿಪಟೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಎಂಬತ್ತಕ್ಕೂ ಹೆಚ್ಚು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಿವೆ. ಕಲ್ಲು ಗಣಿಗಾರಿಕೆಗೆ ಸ್ಫೋಟಕಗಳನ್ನು ನಿಯಮಾವಳಿ ಪ್ರಕಾರ ಬಳಸಿಕೊಳ್ಳಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಜಿಲೆಟಿನ್ ಕಡ್ಡಿಗಳು ಹಾಗೂ ಸ್ಫೋಟಕಗಳನ್ನು ಸಂಗ್ರಹಿಸಿಡುವ ಕೊಠಡಿಗಳನ್ನು ಕೂಡ ನಿಯಮಾವಳಿ ಪ್ರಕಾರವೇ ಪಾಲನೆ ಮಾಡಬೇಕು. ಈ ಕುರಿತಂತೆ ಗಣಿಗಾರಿಕೆ ನಡೆಸುವ ವ್ಯಕ್ತಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಸೂಚನೆ ನೀಡಲಾಗಿದೆ. ಆದರೂ ಕೆಲವರು ನಿಯಮ ಮೀರಿ ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಆಧಾರದ ಮೇಲೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ದಲ್ಲಿರುವ ಸಿದ್ದು ಸ್ಟೋನ್ ಕ್ರಷರ್ ಮೇಲೆ ವಿಶೇಷ ಪೊಲೀಸ್ ತಂಡ ದಾಳಿ ನಡೆಸಿದ ಸಂದರ್ಭದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 25 ಡಿಟೋನೇಟರ್, 55 ಜಿಲೆಟಿನ್ ಕಡ್ಡಿಗಳು, ಎಲೆಕ್ಟ್ರಿಕ್ ಡೈನಾಮೈಟ್​​​ಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಈ ಸಂಬಂಧ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಫೋಟಕಗಳನ್ನು ನಿಯಮ ಮೀರಿ ತಂದಿರುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ಇತ್ತೀಚೆಗೆ ತುಮಕೂರು ತಾಲೂಕಿನ ಹೆಬ್ಬೂರು ಸಮೀಪ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿದ್ದ ಕೊಠಡಿ ಸ್ಫೋಟಗೊಂಡು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕಲ್ಲು ಗಣಿಗಾರಿಕೆ ಪ್ರದೇಶಗಳಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಪರಿಶೀಲನೆಯನ್ನು ನಿರಂತರವಾಗಿ ಪೊಲೀಸ್ ಇಲಾಖೆ ನಡೆಸಲಿದೆ. ಅಲ್ಲದೆ ಕೆಲವರು ಸ್ವಯಂಪ್ರೇರಿತರಾಗಿ ಮಾಹಿತಿಯನ್ನು ನೀಡುತ್ತಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಅಕ್ರಮವಾಗಿ ಸಂಗ್ರಹಿಸಲಾಗುವ ಸ್ಫೋಟಕಗಳ ಮಾಹಿತಿಯನ್ನು ಪಡೆದು ದಾಳಿ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.