ETV Bharat / state

ತುಮಕೂರು: ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ಕೆರೆಯಲ್ಲಿ ಮುಳುಗಿ ಸಾವು

author img

By

Published : Jul 23, 2023, 7:36 PM IST

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬದ ಗ್ರಾಮದ ಕೆರೆಯಲ್ಲಿ ಯುವಕರಿಬ್ಬರು ಮುಳುಗಿ ಮೃತಪಟ್ಟಿದ್ದಾರೆ.

ಕೆರೆಯಲ್ಲಿ ಯುವಕರು ಮುಳುಗಿ ಸಾವು
ಕೆರೆಯಲ್ಲಿ ಯುವಕರು ಮುಳುಗಿ ಸಾವು

ತುಮಕೂರು : ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಗ್ರಾಮದ ಕೆರೆಯಲ್ಲಿ ನಡೆದಿದೆ. ಮೃತ ಯುವಕರನ್ನು ಗುಬ್ಬಿ ತಾಲ್ಲೂಕಿನ ಆಡುಗೊಂಡನಹಳ್ಳಿ ಗ್ರಾಮದ ಹರೀಶ್(31) ಯೋಗೀಶ್ (36) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆರೆ ನೀರಿನೊಳಗೆ ಮೃತದೇಹಗಳಿದ್ದು, ಶೋಧ ಕಾರ್ಯ ಮುಂದುವರೆದಿದೆ.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಡಬ ಗ್ರಾಮದ ಕೆರೆಗೂ ಕೂಡ ನೀರು ಅಧಿಕ ಪ್ರಮಾಣದಲ್ಲಿ ಹರಿದು ಬಂದು ತುಂಬಿದೆ. ಹೀಗಾಗಿ ನಿನ್ನೆ ಶನಿವಾರ ತಮ್ಮ ಸ್ನೇಹಿತರೊಂದಿಗೆ ಈ ಯುವಕರು ಕೂಡ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ವೇಳೆ ಆಕಸ್ಮಿಕವಾಗಿ ಇಬ್ಬರೂ ಕೂಡ ಕಾಲ ಜಾರಿ ಕೆರೆಗೆ ಬಿದ್ದಿದ್ದಾರೆ. ಆದರೆ ಸುತ್ತಮುತ್ತಲಿದ್ದ ಯುವಕರು ಇವರನ್ನು ಪಾರು ಮಾಡಲು ಯತ್ನಿಸಿದರೂ ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಗೇನಕಲ್ ಫಾಲ್ಸ್​ನಲ್ಲಿ ಯುವಕರು ಮುಳುಗಿ ಸಾವು : ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಶನಿವಾರ ನಡೆದಿದೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24) ಮತ್ತು ಅಜಿತ್ (26) ಮೃತರು. ಶನಿವಾರ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ ಯುವಕರ ತಂಡ ದೇವರಿಗೆ ಪೂಜೆ ಸಲ್ಲಿಸಿ ಹೊಗೆನಕಲ್ ಜಲಪಾತಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಜಿತ್ ಮತ್ತು ಶಬರಿ ಈಜಲು ಹೋದವರು ಮತ್ತೆ ವಾಪಸ್ ಬಂದಿರಲಿಲ್ಲ. ವಿಚಾರ ತಿಳಿದ ಸ್ನೇಹಿತರು ಹಾಗೂ ಸ್ಥಳೀಯರು ಮಲೆ ಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸರ ಸಮ್ಮುಖದಲ್ಲಿ ನುರಿತ ಈಜುಗಾರರ ಸಹಾಯದಿಂದ ಬಲೆ ಹಾಕಿ ಇಬ್ಬರ ಶವ ಪತ್ತೆ ಮಾಡಲಾಗಿದ್ದು, ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂದಿ ಬೆಟ್ಟಕ್ಕೆ ಬಂದಿದ್ದ ಯುವಕರು ಕೆರೆಯಲ್ಲಿ ಮುಳುಗಿ ಸಾವು: ಬೆಂಗಳೂರಿನ ಆರ್​.ಟಿ.ನಗರದ ಯುವಕರ ತಂಡ ಮೇ 28ರಂದು ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್​ನಲ್ಲಿ ಬಂದಿದ್ದರು. ಮಧ್ಯಾಹ್ನ ನಂದಿಬೆಟ್ಟದಿಂದ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿದ್ದು, ಮುಳುಗಿ ಸಾವನ್ನಪ್ಪಿದ್ದರು. ಕೆರೆ ದಂಡೆಯಲ್ಲಿ ನಿಂತಿದ್ದ ಬೈಕ್​ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಬಳಿಕ ಮೃತದೇಹಗಳನ್ನು ಹೊರ ತೆಗೆಯಲಾಗಿತ್ತು.

ಈಜಲು ತೆರಳಿದ್ದ ಯುವಕರು ಸಾವು : ಮೈಸೂರಿನ ಜುಲೈ 15ರ ಶನಿವಾರ ಸಂಜೆ ಮೀನಾಕ್ಷಿಪುರದ ಬಳಿ ಶನಿವಾರ ಸಂಜೆ ಕಾವೇರಿ ನದಿಯ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಘಟನೆ ಜರಗಿತ್ತು. ನಗರದ ಪಡುವಾರಹಳ್ಳಿಯ ಭರತ್ (20), ರಾಮಕೃಷ್ಣ ನಗರದ ಪ್ರವೀಣ್ ಮೊಯಿಲ್ (20) ಹಾಗೂ ಹೆಬ್ಬಾಳಿನ ಸೂರ್ಯಬೇಕರಿಯ ವರುಣ್ (21) ಮೃತ ವಿದ್ಯಾರ್ಥಿಗಳು. ವಿಷಯ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದರು. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Watch.. ಕೆರೆಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಟ್ರಾಫಿಕ್ ಪೊಲೀಸ್ ಕಾನ್ಸ್​​ಟೇಬಲ್​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.