ETV Bharat / state

ಕುಂದಾಪುರ: ಕಾಲುಸಂಕ ದಾಟುವಾಗ ಹಳ್ಳಕ್ಕೆ ಬಿದ್ದು ನೀರುಪಾಲಾದ ಬಾಲಕಿ

author img

By

Published : Aug 8, 2022, 7:54 PM IST

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ಕಾಲುಸಂಕ ದಾಟುವಾಗ ಏಳು ವರ್ಷದ ಬಾಲಕಿ ಆಯತಪ್ಪಿ ಹಳ್ಳಕ್ಕೆ ಬಿದ್ದು, ನೀರುಪಾಲಾಗಿದ್ದಾಳೆ.

Girl fell into a ditch while crossing Kalusanka
ಕಾಲುಸಂಕ ದಾಟುವಾಗ ಹಳ್ಳಕ್ಕೆ ಬಿದ್ದ ಬಾಲಕಿ

ಕುಂದಾಪುರ(ಉಡುಪಿ): ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು, ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ನೀರುಪಾಲಾಗಿದ್ದಾಳೆ. ಈ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ. ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ (7) ನೀರುಪಾಲಾಗಿರುವ ಬಾಲಕಿ.

ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಬಿಜಮಕ್ಕಿ ಎಂಬಲ್ಲಿ ಕಾಲು ಸಂಕ ದಾಟುವಾಗ ಬಾಲಕಿ ಆಯತಪ್ಪಿ ಹಳ್ಳಕ್ಕೆ ಬಿದ್ದಿದ್ದಾಳೆ. ಕೂಡಲೇ ವಿಷಯ ತಿಳಿದು ಸಾರ್ವಜನಿಕರು ಹುಡುಕಾಟ ಆರಂಭಿಸಿದ್ದಾರೆ. ಈ ಹಳ್ಳ ಬೊಳಂಬಳ್ಳಿ ನದಿಗೆ ಸೇರುತ್ತಿದೆ. ನೀರಿನ ಸೆಳೆತಕ್ಕೆ ಸನ್ನಿಧಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ ಬಾಲಕಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಕಾಲುಸಂಕ ದಾಟುವಾಗ ಹಳ್ಳಕ್ಕೆ ಬಿದ್ದ ಬಾಲಕಿ

ವಿದ್ಯುತ್ ಲೈನ್ ಸ್ಪರ್ಶಿಸಿ ಹಸುಗಳ ಸಾವು: ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಹರ್ಕೂರು ಎಂಬಲ್ಲಿ ಮೇಯಲು ಹೋದ ನಾಲ್ಕು ಹಸುಗಳು ವಿದ್ಯುತ್ ತಂತಿ ತಗುಲಿದ ಪರಿಣಾಮ, ಸ್ಥಳದಲ್ಲೇ ಸಾವಿಗೀಡಾಗಿವೆ. ಈ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

Girl fell into a ditch while crossing Kalusanka
ವಿದ್ಯುತ್ ಲೈನ್ ಸ್ಪರ್ಶಿಸಿ ಹಸುಗಳ ಸಾವು

25 ವರ್ಷದ ಹಳೆ ವಿದ್ಯುತ್ ತಂತಿ ದುರಸ್ತಿಗೆ ಅನೇಕ ಬಾರಿ ಮನವಿ ಮಾಡಿದರೂ, ದುರಸ್ತಿ ಮಾಡದೇ ನಿರ್ಲಕ್ಷ್ಯ ತೋರಿದ KEB ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿಗಳು ಬಂದು ಪರಿಶೀಲಿಸಿ, ಆದಷ್ಟು ಬೇಗ ಹೊಸ ಲೈನ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್: ವ್ಯಕ್ತಿಯ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.